• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನನ್ನ ರಾಜಕೀಯ ಭವಿಷ್ಯ ನಿಮ್ಮ ಕೈಲಿ: ಎಚ್ಡಿಕೆ

By Staff
|

ತುಮಕೂರು, ಡಿ.26: ಮಧುಗಿರಿ ಮತ್ತು ತುರುವೇಕೆರೆ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ತಮ್ಮ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ತುರುವೇಕೆರೆ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಎಂ ಟಿ ಕೃಷ್ಣಪ್ಪ ಪರ ಪ್ರಚಾರ ಮಾಡಲು ಅವರು ಗುರುವಾರ ಜಿಲ್ಲೆಗೆ ಆಗಮಿಸಿದ್ದರು. ತುರುವೇಕೆರೆ ಮತ್ತು ಮಧುಗಿರಿ ಕ್ಷೇತ್ರದ ಫಲಿತಾಂಶಗಳು ತಮ್ಮ ಪಾಲಿಗೆ ನಿರ್ಣಾಯಕವಾಗಲಿವೆ ಎಂದರು. ತುರುವೇಕೆರೆ ಮತದಾರರು ಕೃಷ್ಣಪ್ಪನವರಿಗೆ ಮತ್ತು ಮಧುಗಿರಿ ಮತದಾರರು ಅನಿತಾ ಕುಮಾರಸ್ವಾಮಿ ಅವರಿಗೆ ಮತಹಾಕಿ ಗೆಲ್ಲಿಸಬೇಕು ಎಂದು ಅವರು ವಿನಂತಿಸಿಕೊಂಡರು.

'ನನ್ನ ರಾಜಕೀಯ ಭವಿಷ್ಯ ನಿಮ್ಮ ಕೈಯಲ್ಲಿದೆ' ಎಂದು ಮತದಾರರನ್ನು ಉದ್ದೇಶಿಸಿ ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರನ್ನು ಕಡೆಗಣಿಸುತ್ತಿದ್ದಾರೆ. ಮುಂದೆಯೂ ಅಷ್ಟೆ ಬಿಜೆಪಿ ಸರ್ಕಾರದಿಂದ ರೈತರಿಗೆ ಯಾವುದೇ ಲಾಭವಾಗುವುದಿಲ್ಲ ಎಂದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X