Get Updates
Get notified of breaking news, exclusive insights, and must-see stories!

ಕೋಲಾರದಲ್ಲಿ ಗಜಿನಿ ಚಿತ್ರಕ್ಕೆ ತೀವ್ರ ವಿರೋಧ

ಕೋಲಾರ, ಡಿ.26: ಅಮೀರ್ ಖಾನ್ ಅಭಿನಯದ ಬಾಲಿವುಡ್ ಚಿತ್ರ 'ಗಜಿನಿ'ಗೆ ಕೋಲಾರದಲ್ಲಿ ವಿರೋಧ ವ್ಯಕ್ತವಾಗಿದೆ. ಚಿತ್ರ ಪ್ರದರ್ಶನವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕೋಲಾರದಲ್ಲಿ ತೀವ್ರವಾಗಿ ಪ್ರತಿಭಟಿಸಿದರು.

ಚಿತ್ರಮಂದಿರದ ಮಾಲೀಕರು ನೀತಿ ನಿಯಮಗಳನ್ನು ಉಲ್ಲಂಘಿಸಿ ಚಿತ್ರವನ್ನು ಪ್ರದರ್ಶಿಸುತ್ತಿದ್ದಾರೆ. ಕೂಡಲೆ ಗಜಿನಿ ಚಿತ್ರ ಪ್ರದರ್ಶನವನ್ನು ನಿಲ್ಲಿಸಬೇಕು. ಜಿಲ್ಲಾಡಳಿತ, ಚಿತ್ರಮಂದಿರದ ಮಾಲೀಕರು ಹಾಗೂ ಪೊಲೀಸರು ಪ್ರದರ್ಶನವನ್ನು ನಿಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರವೇ ಕಾರ್ಯಕರ್ತರು ಮನವಿ ಮಾಡಿಕೊಂಡರು.

ಪ್ರತಿಭಟನೆಯಲ್ಲಿ ನಿರತರಾಗಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದಾಗ ವೇದಿಕೆಯ ಜಿಲ್ಲಾಧ್ಯಕ್ಷ ಕೋದಂಡರಾಮಯ್ಯ ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಚಿತ್ರ ಪ್ರದರ್ಶನವನ್ನು ನಿಲ್ಲಿಸಲೇಬೇಕು ಎಂದು ಧರಣಿ ಕುಳಿತುಕೊಂಡರು. ಕಡೆಗೆ ಚಿತ್ರಮಂದಿರದ ಮಾಲೀಕರು ವಿಧಿ ಇಲ್ಲದೆ ಚಿತ್ರ ಪ್ರದರ್ಶನವನ್ನು ನಿಲ್ಲಿಸಿ ಸೋಮವಾರಕ್ಕೆ ಮುಂದೂಡಿದರು.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+