• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಸ್ತೆಯಲ್ಲಿ ಗುಂಡಿ ಕಂಡರೆ ಫೋನ್ ಮಾಡಿ

By Staff
|

ಮಡಿಕೇರಿ. ಡಿ. 26 ನಂಬಿದರೆ ನಂಬಿ ಬಿಟ್ಟರೆ ಬಿಡಿ. ಲೋಕೋಪಯೋಗಿ ಇಲಾಖೆ ಕೊಡಗು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಕಾರ್ಯ ಆರಂಭವಾಗಿದ್ದು ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಯಾವುದೇ ಇತರ ಕಾರಣಗಳಿಂದ ರಸ್ತೆಗಳ ಗುಂಡಿಗಳು ಉಂಟಾದಲ್ಲಿ ಅಥವಾ ಕಂಡುಬಂದಲ್ಲಿ ಕೂಡಲೇ ಈ ಕೆಳಗೆ ತಿಳಿಸಿರುವ ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ವೃತ್ತದ ಲೋಕೋಪಯೋಗಿ ಬಂದರು, ಒಳನಾಡು, ಜಲಸಾರಿಗೆ ಇಲಾಖೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕೊಡಗು ವಿಭಾಗದ ಮಡಿಕೇರಿಯ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ದೂ.ಸಂಖ್ಯೆ: 08272-225645 ಮೊ: 94481 30414. ಮಡಿಕೇರಿಯ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತ್ಯನಾರಾಯಣ ದೂ.ಸಂಖ್ಯೆ: 08272-228720: ಮೊ. 94483 46233.

ವೀರಾಜಪೇಟೆ ಉಪವಿಭಾಗದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎ. ಸುಧೀರ್ ಕುಮಾರ್ ದೂ.ಸಂಖ್ಯೆ: 08272-257410 ಮೊ: 98452 93213. ಸೋಮವಾರಪೇಟೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಕೃಷ್ಣ ದೂ.ಸಂಖ್ಯೆ: 08272-282015ಮೊ: 99166 93881 ಇವರನ್ನು ಸಂಪರ್ಕಿಸಬಹುದಾಗಿದೆ.

ನಿಮ್ಮ ಊರಿನ ರಸ್ತೆಗಳ ಆರೋಗ್ಯ ಚೆನ್ನಾಗಿರಲಿ. ಪ್ರಯಾಣ ಸುಖಕರವಾಗಿರಲಿ!

( ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X