• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೇವೇಗೌಡರಿಂದ ತೃತೀಯ ರಂಗದ ಜಪ

By Staff
|

ಬೆಳಗಾವಿ, ಡಿ.26: ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ 'ತೃತೀಯ ರಂಗ'ವನ್ನು ಹೊಸವರ್ಷದಲ್ಲಿ ಸ್ಥಾಪಿಸುವ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಸುಳಿವು ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸ್ಥಳೀಯ ಪಕ್ಷಗಳ ಮುಖಂಡರೊಡನೆ ಒಂದು ಸುತ್ತಿನ ಮಾತುಕತೆ ಮುಗಿದೆ. ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್, ಬಹುಜನ ಸಮಾಜವಾದಿ ಪಕ್ಷದ ಮಾಯಾವತಿ, ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು, ಎಐಎಡಿಎಂಕೆಯ ಜಯಲಲಿತ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ ಮತ್ತು ಎಡಪಕ್ಷಗಳೊಂದಿಗೆ ಈಗಾಗಲೆ ಚರ್ಚಿಸಿರುವುದಾಗಿ ಅವರು ತಿಳಿಸಿದರು.

ಕರ್ನಾಟಕದಲ್ಲಿ ಉಪ ಚುನಾವಣೆಗಳು ಮುಗಿದ ಬಳಿಕ ಜನವರಿ ತಿಂಗಳಲ್ಲಿ ನವದೆಹಲಿಯಲ್ಲಿ ಮತ್ತೊಮ್ಮೆ ಸಭೆ ಸೇರಿ ಚರ್ಚಿಸುವುದಾಗಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X