ಕೆಆರ್ ಪುರಂನಲ್ಲಿ ಕಟ್ಟಡ ಕುಸಿತ, 8 ಜನರಿಗೆ ಗಾಯ

ಬೆಂಗಳೂರು, ಡಿ. 27 : ಕೆ.ಆರ್. ಪುರಂ ಬಳಿ ಭಟ್ಟರ ಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಕುಸಿದು 8 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಡಿ ಕೆಲ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

ಕೈಗಾರಿಕಾ ಘಟಕವೊಂದು ನಿರ್ಮಾಣ ಹಂತದಲ್ಲಿದ್ದಾಗ ಈ ಅವಘಡ ಸಂಭವಿಸಿದೆ. ನಿರ್ಮಾಣದಲ್ಲಿ ಸುಮಾರು 18ರಿಂದ 20 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಟ್ಟಡದ ಸೆಂಟ್ರಿಂಗ್ ಕುಸಿದಿದೆ. ಕುಸಿತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಅಪಘಾತ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಲಿನ ಜನರೂ ನೆರವಿಗೆ ಧಾವಿಸಿದ್ದಾರೆ. ಸುಮಾರು ಎಂಟು ಜನರನ್ನು ಕಾಪಾಡಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+