ಬೆಳಗಾವಿಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಭದ್ರತೆ

ಬೆಳಗಾವಿ, ಡಿ. 27: ಹುಕ್ಕೇರಿ ಹಾಗೂ ಅರಭಾವಿ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ, ಡಿ.30 ರಂದು ಬೆಳಗಾವಿ ನಗರದ ಕೇಂದ್ರವಾದ ಮರಾಠಾ ಮಂಡಳ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಮತಎಣಿಕೆ ಸಂದರ್ಭದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಕಾಲೇಜಿನ ಸುತ್ತಮುತ್ತಲು 144 ನೇ ಕಲಂನನ್ವಯಡಿ.30 ಹಾಗೂ ಡಿ. 31ದಿನಾಂಕಗಳಂದು ವಿವಿಧ ಚಟುವಟಿಕೆಗಳನ್ನು ಪ್ರತಿಬಂಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ.

ಡಿ.30 ರ ಬೆಳಿಗ್ಗೆ 5 ಗಂಟೆಯಿಂದ ಡಿ.31 ರ ಬೆಳಿಗ್ಗೆ 6 ಗಂಟೆಯವರೆಗೆ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಿ ತಿರುಗಾಡುವುದನ್ನು ನಿಷೇಧಿಸಿದೆ. ಅದರಂತೆ ಪ್ರಚೋದನಕಾರಿ ಘೋಷಣೆ ಹಾಕುವುದನ್ನು, ಸಾರ್ವಜನಿಕ ಸಭೆ, ಮೆರವಣಿಗೆ ಮಾಡುವುದನ್ನು (ಶವ ಸಂಸ್ಕಾರ ಮತ್ತು ಮದುವೆ ಮೆರವಣಿಗೆಗಳನ್ನು ಹೊರತುಪಡಿಸಿ), ಆಯುಧ, ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವದನ್ನು, ಮತ ಎಣಿಕೆ ಕೇಂದ್ರದಲ್ಲಿ ಬೀಡಿ, ಸಿಗರೇಟು, ಗುಟಕಾ, ಎಲೆಅಡಿಕೆ ಉಪಯೋಗಿಸುವುದನ್ನು ಹಾಗೂ ಮೊಬೈಲ್ ದೂರವಾಣಿಗಳನ್ನು ತೆಗೆದು ಕೊಂಡು ಬರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಜೆ. ರವಿಶಂಕರ ಆದೇಶ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+