ಮಹಿಳೆ ಮತ್ತು ಮಾಧ್ಯಮ ಕುರಿತು ವಿಚಾರ ಸಂಕಿರಣ
ಬೆಂಗಳೂರು, ಡಿ. 28: ವಾರ್ತಾ ಇಲಾಖೆ ಮತ್ತು ಮಾಧ್ಯಮ ಅಕಾಡೆಮಿ ಜಂಟಿಯಾಗಿ ಮಹಿಳೆ ಮತ್ತು ಮಾಧ್ಯಮ ಎಂಬ ವಿಷಯ ಕುರಿತು ವಿಚಾರ ಸಂಕಿರಣವನ್ನು ಡಿ.29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎನ್. ಆರ್. ಚೌಕದಲ್ಲಿರುವ ಬಾದಾಮಿ ಕಟ್ಟಡದಲ್ಲಿರುವ ಪ್ರಿಯದರ್ಶಿನಿ ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದೆ.
ಈ ವಿಚಾರ ಸಂಕಿರಣವನ್ನು ಅಬಕಾರಿ, ಬೆಂಗಳೂರು ನೀರು ಸರಬರಾಜು, ಐ.ಟಿ. ಮತ್ತು ಬಿ.ಟಿ. ಹಾಗೂ ವಾರ್ತಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಉದ್ಫಾಟಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದ ವಿದ್ಯಾರ್ಥಿಗಳು ಈ ವಿಚಾರಸಂಕಿರಣದಲ್ಲಿ ಪಾಲ್ಗೊಳ್ಳಬಹುದಾಗಿದೆ.(ವಿಚಾರ ಸಂಕಿರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಹಾಗೂ ಭಾಗವಹಿಸಲು ಇಚ್ಛಿಸುವ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಟಿ.ಸಿ. ಕಾತ್ಯಾಯಿನಿ, ಹಿರಿಯ ಸಹಾಯಕ ನಿರ್ದೇಶಕರು, ಬೆಂಗಳೂರು (ಮೊ: 9972883442) ಸಂಪರ್ಕಿಸಬಹುದು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications