ಕಾಶ್ಮೀರ:ಕೈ, ಕಾನ್ಫರೆನ್ಸ್ ಸರ್ಕಾರ ಅಸ್ತಿತ್ವಕ್ಕೆ ?

ಶ್ರೀನಗರ, ಡಿ. 29 : ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆತಿಲ್ಲ. ಆದರೆ ಅತೀ ಹೆಚ್ಚು ಸ್ಥಾನಗಳನ್ನು ಫಾರೂಕ್ ಅಬ್ದುಲ್ಲ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಪಡೆದುಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸಲು ಸೋಮವಾರ ಕೋರಿಕೆ ಮಂಡಿಸುವುದು ಸ್ಷಷ್ಟವಾಗಿದೆ.

ಒಟ್ಟು 87 ವಿಧಾನಸಭೆ ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್ 28 ಗೆದ್ದುಕೊಂಡಿದ್ದರೆ, 21 ಸ್ಥಾನಗಳಲ್ಲಿ ಪೀಪಲ್ಸ್ ಡೆಮಾಕ್ರಿಟಿಕ್ ಪಾರ್ಟಿ ಜಯಭೇರಿ ಭಾರಿಸಿದೆ. ಕಾಂಗ್ರೆಸ್ 17 ಸ್ಥಾನದಲ್ಲಿ ಪಡೆದುಕೊಂಡು ಮೂರನೇ ಸ್ಥಾನದಲ್ಲಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಭಾರತೀಯ ಜನತಾ ಪಾರ್ಟಿ ಕಣಿವೆ ರಾಜ್ಯದಲ್ಲಿ ತನ್ನ ಖಾತೆ ಆರಂಭಿಸಿದ್ದು ಉತ್ತಮ ಬೆಳವಣಿಗೆಯಾಗಿದೆ. ಬಿಜೆಪಿಗೆ 11 ಕ್ಷೇತ್ರಗಳು ಲಭಿಸಿವೆ.

ಕಾಂಗ್ರೆಸ್ ಬೆಂಬಲದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ. ಇದರ ಜತೆಗೆ ಫಾರೂಕ್ ಅಬ್ದುಲ್ಲ ಪುತ್ರ ಕೇಂದ್ರದ ಮಾಜಿ ಸಚಿವ ಒಮರ್ ಅಬ್ದುಲ್ಲ ಕೂಡಾ ಸಿಎಂ ಹುದ್ದೆಗೇರುವ ಲಕ್ಷಣಗಳೂ ಇವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+