ಸಿದ್ದುಗೆ ರಾಜಕೀಯ ಭವಿಷ್ಯವಿಲ್ಲ,: ದೇಶಪಾಂಡೆ
ಬೆಂಗಳೂರು, ಡಿ, 29 : ಉಪಚುನಾವಣೆ ಪ್ರಚಾರ ಕಾರ್ಯಕ್ಕೆ ಗೈರಾಗಿದ್ದ ಸಿದ್ದರಾಮಯ್ಯ ಅವರ ಕ್ರಮಕ್ಕೆ ಕೆಪಿಸಿಸಿ ವಲಯದಿಂದ ವ್ಯಾಪಕವಾಗಿ ಬಹಿರಂಗ ಟೀಕೆಗಳು ಕೇಳ ಬರತೊಡಗಿವೆ. ಇಷ್ಟು ದಿನ ಸಿದ್ದರಾಮಯ್ಯ ಪ್ರಚಾರ ಕಾರ್ಯಕ್ಕೆ ಬರುತ್ತಾರೆ, ಕಾಂಗ್ರೆಸ್ ನಲ್ಲಿಯೇ ಸಕ್ರಿಯರಾಗಿದ್ದಾರೆ ಎಂದು ಹೇಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇಂದು ಸಿದ್ದು ವಿರುದ್ಧ ಉಗ್ರ ರೂಪತಾಳಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಉಪಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಿ ಎಂದು ಪಕ್ಷದ ಹಿರಿಯ ನಾಯಕರು ಮಾಡಿಕೊಂಡ ಮನವಿ ಸಿದ್ದರಾಮಯ್ಯ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ ಎಂದು ದೇಶಪಾಂಡೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ವರ್ತನೆ ಎಳ್ಳಷ್ಟು ಸರಿಯಿಲ್ಲ, ಸಿದ್ದರಾಮಯ್ಯ ಅವರಿಗೆ ರಾಜಕೀಯ ಭವಿಷ್ಯವೇ ಇಲ್ಲ ಎಂದು ಟೀಕಿಸಿದರು.
ಪಕ್ಷ ಮುಖಂಡರು ಅನೇಕ ಬಾರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಿ ಎಂದು ಕೇಳಿಕೊಂಡರು ನಮಗೆ ಅಗೌರವ ತೋರಿಸಿದ್ದಾರೆ. ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೂ ಬೆಲೆ ಕೊಟ್ಟಿಲ್ಲ. ಪಕ್ಷದ ಒಬ್ಬ ಜವಾಬ್ದಾರಿಯತ ನಾಯಕರಾಗಿ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಅವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳದಿರುವುದೇ ಮೊದಲು ತಪ್ಪು ಎಂದು ಸಿದ್ದರಾಮಯ್ಯ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
(ದಟ್ಸ್ ಕನ್ನಡ ವಾರ್ತೆ)
ಸಿದ್ದು ಕೈ ಕೊಟ್ಟರೆ ನಷ್ಟವಿಲ್ಲ: ಡಿಕೆ ಶಿವಕುಮಾರ್












Click it and Unblock the Notifications