ಪ್ರಗ್ಯಾಸಿಂಗ್ ಜ 6ವರೆಗೆ ನ್ಯಾಯಾಂಗ ಬಂಧನ

ಮುಂಬೈ, ಡಿ. 29 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮೋಕಾ ಕಾಯ್ದೆಯಡಿ ಬಂಧಿಸಲಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ನ್ಯಾಯಾಲಯ ಜನವರಿ 6ರ ವರೆಗೆ ಮುಂದುವರಿಸಿದೆ.

ಕಳೆದ ಸೆಪ್ಟೆಂಬರ್ 29 ರಂದು ಮಾಲೇಗಾಂವ್ ನಲ್ಲಿ ನಡೆದ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ್ ಕರ್ಕರೆ ಬೆಳಕಿಗೆ ತಂದಿದ್ದರು. ಈ ಸ್ಫೋಟ ಪ್ರಕರಣದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಪ್ರಕರಣದಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಗೆ ಸಂಬಂಧಿಸಿದ ಬೈಕೊಂದು ತನಿಖೆ ವೇಳೆ ಸಿಕ್ಕಿತ್ತು. ಇದರ ಜಾಡು ಹಿಡಿದು ಹೊರಟ ಮಹಾರಾಷ್ಟ್ರ ಎಟಿಎಸ್ ಪೊಲೀಸರು, ಲೆಫ್ಟಿನೆಂಟ್ ಶ್ರೀಕಾಂತ್ ಪುರೋಹಿತ್, ಅಭಿನವ್ ಪಾಂಡೆ, ಸಮೀರ್ ಕುಲಕರ್ಣಿ ಅವರನ್ನು ಸಹ ಬಂಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಮಾಲೇಗಾಂವ್ ಸ್ಫೋಟದಲ್ಲಿ ಹಿಂದು ಸಾಧ್ವಿ
ಹಿಂದು ಜಾಗರಣ ಮಂಚ್ ನಿಷೇಧಿಸಿ: ಬೃಂದಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+