ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ

By Staff
|
Google Oneindia Kannada News

balachandra jarakholi
ಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಗೆಲುವಿನ ಹೊಸ್ತಿನಲ್ಲಿ ಬಂದು ನಿಂತಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ವರ್ಚಸ್ಸಿನ ನಾಯಕ. ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಉತ್ತಮ ವ್ಯಕ್ತಿತ್ವದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅರಭಾವಿ ಕ್ಷೇತ್ರದ ಜನತೆ ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು 30574 ಸಾವಿರಕ್ಕಿಂತ ಅಧಿತ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಬಿಜೆಪಿ ಪಾಳೆಯದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ದೇವದುರ್ಗ ಕ್ಷೇತ್ರದಲ್ಲಿ ಶಿವನಗೌಡ ನಾಯಕ ಭಾರಿ ಮುನ್ನಡೆ ಕಾಯ್ದಕೊಂಡಿದ್ದಾರೆ. ಮಧುಗಿರಿಯ 5ನೇ ಸುತ್ತಿನ ಮತ ಏಣಿಕೆ ನಂತರ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ 1205 ಮತಗಳ ಮುನ್ನೆಡೆ ಗಳಿಸಿದ್ದಾರೆ. ಕಾಂಗ್ರೆಸ್ ತನ್ನ ಖಾತೆ ಈ ವರೆಗೂ ತೆರೆದಿಲ್ಲ. ದೊಡ್ಡಬಳ್ಳಾಪುರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ವೆಂಕಟಾಚಲಯ್ಯ ಅವರಿಂದ ಆ ಮುನ್ನೆಡೆಯನ್ನು ಬಿಜೆಪಿ ಅಭ್ಯರ್ಥಿ ನರಸಿಂಹಸ್ವಾಮಿ ಕಸಿದುಕೊಂಡಿದ್ದಾರೆ. ಮದ್ದೂರಿನಲ್ಲಿ ಕಲ್ಪನಾ ಸಿದ್ದರಾಜು 4400 ಮತಗಳ ಮುನ್ನೆಡೆ ಗಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X