ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು

By Staff
|
Google Oneindia Kannada News

anand asnotikar
ಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಯಾಗಿದ್ದ ಶಿವನಗೌಡ ನಾಯಕ ಬಿಜೆಪಿ ಸರ್ಕಾರದಲ್ಲಿ ಸತಚಿವರಾಗಿ ಉಪಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ದೇವದುರ್ಗದ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರು.

ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಬೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ.

ಅರಭಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ 78,986 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಪಕ್ಷ 46, 123 ಹಾಗೂ ಜೆಡಿಎಸ್ 5135 ಮತಗಳನ್ನು ಪಡೆದುಕೊಂಡಿದ್ದಾರೆ. ಹುಕ್ಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಕತ್ತಿ ಒಟ್ಟು 83,264 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಹೀನಾಯ ಸೋಲನುಭವಿಸಿವೆ ಎಂದೇ ಹೇಳಬಹುದು. ಕಾಂಗ್ರೆಸ್ 11,988 ಹಾಗೂ ಜೆಡಿಎಸ್ 15705 ಮತಗಳನ್ನು ಪಡೆದುಕೊಂಡಿದ್ದಾರೆ.

ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಒಟ್ಟು 48,266 ಮತಗಳನ್ನು ಪಡೆದರೆ, ಕಾಂಗ್ರೆಸ್ 32,104 ಮತಗಳನ್ನು ಹಾಗೂ ಜೆಡಿಎಸ್ 13987 ಮತಗಳನ್ನು ಪಡೆಕೊಂಡಿವೆ.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಹುಕ್ಕೇರಿ: ಬಿಜೆಪಿಯ ಉಮೇಶ್ ಕತ್ತಿ ಭರ್ಜರಿ ಜಯ
ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ
6 ಕ್ಷೇತ್ರಗಳಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ
ಮರುಚುನಾವಣೆಯಲ್ಲಿ ಮತ್ತೆ ಬಿಜೆಪಿ ಪ್ರಾಬಲ್ಯ ?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X