ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ

umesh katti
ಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ ಹೊಸ್ತಿನಲ್ಲಿ ಬಂದು ನಿಂತಿದ್ದಾರೆ.

ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ.

ಬಿಜೆಪಿ ಪಾಳೆಯದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ದೇವದುರ್ಗ ಕ್ಷೇತ್ರದಲ್ಲಿ ಶಿವನಗೌಡ ನಾಯಕ ಭಾರಿ ಮುನ್ನಡೆ ಕಾಯ್ದಕೊಂಡಿದ್ದಾರೆ. ಮಧುಗಿರಿಯ 6ಮೇ ಸುತ್ತಿನ ಮತ ಏಣಿಕೆ ನಂತರ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ 1730 ಮತಗಳ ಮುನ್ನೆಡೆ ಗಳಿಸಿದ್ದಾರೆ. ಕಾಂಗ್ರೆಸ್ ತನ್ನ ಖಾತೆ ಈ ವರೆಗೂ ತೆರೆದಿಲ್ಲ. ದೊಡ್ಡಬಳ್ಳಾಪುರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ವೆಂಕಟಾಚಲಯ್ಯ ನಂತಪ ಆ ಮುನ್ನೆಡೆಯನ್ನು ಬಿಜೆಪಿ ಅಭ್ಯರ್ಥಿ ನರಸಿಂಹಸ್ವಾಮಿ ಕಸಿದುಕೊಂಡಿದ್ದಾರೆ. ಮದ್ದೂರಿನಲ್ವಲಿ ಕಲ್ಪನಾ ಸಿದ್ದರಾಜು 4400 ಮತಗಳ ಮುನ್ನೆಡೆ ಗಳಿಸಿದ್ದಾರೆ. ಕಾರವಾರದಲ್ಲಿ ಅನಂತದ ಅಸ್ನೋಟಿಕರ್ 11085 ಮತಗಳ ಅಂತರದಿಂದ ಮುನ್ನೆಡೆ ಕಾಯ್ದುಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ
6 ಕ್ಷೇತ್ರಗಳಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+