ಗೌಡರಿಗೆ ಡಾ.ಬಿಎಸ್ ವೈ ಹೊಸವರ್ಷದ ಕೊಡುಗೆ
ಬೆಂಗಳೂರು, ಜ.1: ''ದೇವೇಗೌಡರಿಗೆ ಹೊಸ ವರ್ಷದ ಶುಭಾಷಯಗಳು. ಅವರ ಮೇಲೆ ಹೂಡಬೇಕೆಂದಿದ್ದ ಮಾನನಷ್ಟ ಮೊಕದ್ದಮೆಯನ್ನು ಕೈಬಿಡುತ್ತಿದ್ದೇನೆ. ಇದೇ ನಾನು ದೇವೇಗೌಡರಿಗೆ ನೀಡುತ್ತಿರುವ ಹೊಸ ವರ್ಷದ ಕೊಡುಗೆ'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದರು.
ಬೆಂಗಳೂರು- ಮೈಸೂರು ಕಾರಿಡಾರ್ ರಸ್ತೆಯಲ್ಲಿ ಸಂಚರಿಸುತ್ತಿರುವ ವಾಹನಗಳಿಗೆ ವಿಧಿಸುತ್ತಿರುವ ಶುಲ್ಕಕ್ಕೆ ಸಂಬಂಧಿಸಿದಂತೆ ದೇವೇಗೌಡರು ಮುಖ್ಯಮಂತ್ರಿಗಳ ಮೇಲೆ ಗಂಭೀರ ಆರೋಪ ಎಸಗಿದ್ದರು. ನೈಸ್ ಕಂಪನಿಯ ಅಶೋಕ್ ಖೇಣಿ ಹಾಗೂ ಯಡಿಯೂರಪ್ಪನವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವಾಹನ ಸವಾರರಿಂದ ಅವರಿಬ್ಬರೂ ಯರ್ರಾ ಬಿರ್ರಿಯಾಗಿ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದರು.
ದೇವೇಗೌಡರ ಹೇಳಿಕೆಗೆ ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪನವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಆದರೆ ಎಂಟು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿದ್ದು ದೇವೇಗೌಡರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಇದೇ ಅವರಿಗೆ ಶಿಕ್ಷೆಯಾಗಿ ಪರಿಣಮಿಸಿದೆ. ಹಾಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ :ಸಿಎಂ












Click it and Unblock the Notifications