ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ

By Staff
|
Google Oneindia Kannada News

omar abdullah
ಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು.

ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್ ಎನ್ ವೊಹ್ರಾ ಅವರು ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಒಮರ್ ಅಬ್ದುಲ್ಲಾ ಜೊತೆಗೆ 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ ಐದು ಮಂದಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಐದು ಜನ ಕಾಂಗ್ರೆಸ್ ಶಾಸಕರು ಸೇರಿದ್ದಾರೆ. ಉಪಮುಖ್ಯಮಂತ್ರಿ ಎಂದು ಹೇಳಲಾದ ಕಾಂಗ್ರೆಸ್ ತಾರಾಚಂದ್ ಅವರು ಒಮರ್ ಅಬ್ದುಲ್ಲಾ ನಂತರ ಪ್ರಮಾಣ ವಚನ ಸ್ವೀಕರಿಸಿದರು. ತಾರಾ ಚಂದ್ ಅವರನ್ನು ಅಧಿಕೃತವಾಗಿ ಉಪಮುಖ್ಯಮಂತ್ರಿ ಕಾಂಗ್ರೆಸ್ ಘೋಷಿಸಿಲ್ಲ.

ಜಮ್ಮು ಕಾಶ್ಮೀರದ ವಿಧಾನಸಭೆ ಒಟ್ಟು 87 ಶಾಸಕರ ಸಂಖ್ಯೆಯನ್ನು ಹೊಂದಿದೆ. ಕಳೆದ ವರ್ಷ ನವೆಂಬರ್-ಡಿಸೆಂಬರ್ ನಲ್ಲಿ ನಡೆದ 7 ಹಂತದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ 28 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾವ ಪಕ್ಷಗಳಿಗೂ ಬಹುಮತ ಬಾರದಿದ್ದರಿಂದ ನ್ಯಾಷನಲ್ ಕಾನ್ಫರೆನ್ಸ್ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದೆ.

ಕಾಂಗ್ರೆಸ್ ಈ ಚುನಾವಣೆಯಲ್ಲಿ 17 ಸ್ಥಾನಗಳನ್ನು ಜಯಗಳಿಸಿದೆ. ಬಿಜೆಪಿ ಪ್ರಥಮ ಬಾರಿಗೆ ಕಣಿವೆ ರಾಜ್ಯದಲ್ಲಿ 11 ಸ್ಥಾನಗಳನ್ನು ಗಳಿಸಿರುವುದು ವಿಶೇಷವಾಗಿದೆ. ಒಮರ್ ಅಬ್ದುಲ್ಲಾ ಅವರು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕೆ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಆಗ ಅವರಿಗೆ ಬರೀ 28 ವರ್ಷ ಆಗಿತ್ತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X