ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು

By Staff
|
Google Oneindia Kannada News

Kheni is a much much big trickster than Satyam Raju-HDD
ಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ ಖೇಣಿ ಸುಮಾರು 30 ಸಾವಿರ ಕೋಟಿ ರುಪಾಯಿಗಳ ಅವ್ಯವಹಾರ ನಡೆಸಿದರೂ ಯಾರೂ ತುಟಿಬಿಟ್ಟೆನ್ನದಿರುವುದು ವಿಪರ್ಯಾಸದ ಸಂಗತಿ ಎಂದು ಹೇಳಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೌಡರು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸುಮಾರು 30 ಸಾವಿರ ಕೋಟಿ ರುಪಾಯಿಗಳಷ್ಟು ಸಾರ್ವಜನಿಕ ಹಣವನ್ನು ನುಂಗಿ ಹಾಕಿರುವ ಅಶೋಖ್ ಖೇಣಿ ಬಗ್ಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೃದುಧೋರಣೆ ತಾಳಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶೋಕ್ ಖೇಣಿ ಅವರು ನೈಸ್ ಸಂಸ್ಥೆ ಮೇಲಿರುವ ಎಲ್ಲ ಅಡ್ಡಿ ಆತಂಕ ಹಾಗೂ ಸಮಸ್ಯೆಗಳನ್ನು ನಿವಾರಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇರ ಬೆಂಬಲವಿದೆ ಎಂದು ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನೈಸ್ ಹಗರಣ ಕುರಿತಂತೆ ಈಗಾಗಲೇ ಕಿರುಹೊತ್ತಿಗೆಯನ್ನು ಹೊರತರಲಾಗಿದೆ. ಈ ಪುಸ್ತಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ, ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಅನೇಕ ಗಣ್ಯರಿಗೆ ಕಳುಹಿಸಲಾಗಿದೆ ಎಂದು ದೇವೇಗೌಡ ಹೇಳಿದರು. ಈ ಕುರಿತು ಸಮಗ್ರ ತನಿಖೆಯ ಅಗತ್ಯವಿದೆ. ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೈಸ್ ಸಂಬಂಧಿಸಿದಂತೆ ಯಾವ ಕ್ರಮವನ್ನು ಕೈಗೊಳ್ಳದೆ ಖೇಣಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ದೇವೇಗೌಡ ಆರೋಪಿಸಿದರು.

(ದಟ್ಸ್ ಕನ್ನಡ ವಾರ್ತೆ)
ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X