ಕಾನೂನು ವಿವಿ ಕುಲಪತಿಯಾಗಿ ಜೆ.ಎಸ್.ಪಾಟೀಲ್

ಬೆಂಗಳೂರು, ಜ. 11:ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿಗಳಾಗಿ ಡಾ|| ಜೆ.ಎಸ್.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಘನತೆವೆತ್ತ ರಾಜ್ಯಪಾಲ ರಾಮೇಶ್ವರ್ ಠಾಕೂರ್‌ರವರು ಡಾ|| ಜೆ.ಎಸ್ ಪಾಟೀಲ್ ಅವರನ್ನು ಕುಲಪತಿಗಳನ್ನಾಗಿ ನೇಮಿಸಿ ಜನವರಿ 9 ರಂದು ಆದೇಶ ಹೊರಡಿಸಿದ್ದಾರೆ.

ಜೆ.ಎಸ್ ಪಾಟೀಲ್ ಅವರು ಈ ಹಿಂದೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾಗಿ, ಹಣಕಾಸು ಅಧಿಕಾರಿಯಾಗಿ ಹಾಗೂ ಕುಲಪತಿಗಳಾಗಿಯೂ ಕೆಲ ಕಾಲ ಸೇವೆ ಸಲ್ಲಿಸಿರುತ್ತಾರೆ.

1945ರ ಮಾರ್ಚ್ 10 ರಂದು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಜನಿಸಿದ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಿಂದ ಪದವಿ, ಮೈಸೂರು ವಿಶ್ವವಿದ್ಯಾಲಯದಿಂದ ಎಲ್.ಎಲ್.ಎಂ ಮತ್ತು ರಾಜಕೋಟದ ಸೌರಾಷ್ಟ್ರದ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪಡೆದಿದ್ದಾರೆ.

1979ರಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿ 1982ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು 1988ರಲ್ಲಿ ಪ್ರಾಧ್ಯಾಪಕರಾಗಿ ನೇಮಕಗೊಂಡು ಸೇವೆ ಸಲ್ಲಿಸಿರುತ್ತಾರೆ. ಪಾಟೀಲರು ಇದುವರೆಗೆ 12 ಪುಸ್ತಕಗಳನ್ನು ರಚಿಸಿರುತ್ತಾರೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+