ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ. 27 ರಂದು ಅಡ್ವಾಣಿ ಜೊತೆ ಸಿದ್ದು ಮಾತುಕತೆ

By Staff
|
Google Oneindia Kannada News

ಬೆಳಗಾವಿ, ಜ. 18 : ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಸಂಬಂಧ ಜ. 25 ರೊಳಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳದಿದ್ದರೆ ಹೊಸ ಪಕ್ಷದ ಹೆಸರು ಘೋಷಿಸಿರುವುದಾಗಿ ಸಿದ್ದರಾಮಯ್ಯ ಗುಡುಗಿದ್ದಾರೆ. ಗಡುವಿನೊಳಗೆ ಹೈಕಮಾಂಡ್ ನಿಂದ ಸೂಕ್ತ ಪ್ರತಿಕ್ರಿಯೆ ಬರದಿದ್ದರೆ ಜ. 27 ರಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಭೇಟಿ ಮಾಡುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಗೋವಾದ ಕಡಲ ಕಿನಾರೆಯಲ್ಲಿ ಬೆಂಬಲಿಗರೊಂದಿಗೆ ಬಿಡಾರ ಹೂಡಿರುವ ಸಿದ್ದು, ಪಕ್ಷದಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡದೆ ಕಡಗಣಿಸಿರುವ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಾವು ನೀಡಿರುವ ಗಡುವಿನೊಳಗೆ ತೀರ್ಮಾನ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಸಿದ್ದು ಬೆದರಿಕೆ ಹಾಕಿದ್ದಾರೆ. ಸಿದ್ದರಾಮಯ್ಯ ಅವರ ಎಚ್ಚರಿಕೆಯ ಸಂದೇಶವನ್ನು ಈ ಸಂದೇಶವನ್ನು ಬೆಂಬಲಿಗರೊಬ್ಬರು ಹೈಕಮಾಂಡ್ ಗೆ ಯಥಾವತ್ತಾಗೇ ರವಾನಿಸಿದ್ದಾರೆ.

ಸಿದ್ದು ಹೊಸ ಪಕ್ಷ ಸ್ಥಾಪಿಸಿದರೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಇನ್ನಿಲ್ಲದ ಹರಸಾಹಸ ತೋರಿಸುತ್ತಿದೆ. ಜತೆಗೆ ಹಳೆ ಮೈಸೂರು ಭಾಗದಲ್ಲಿ 3-4 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಹೇಳಿದೆ. ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜತೆ ಕೈಜೋಡಿಸಿ ಎಂದು ಬೆಂಬಲಿಗರೂ ಸಿದ್ದು ಅವರನ್ನು ಬೆನ್ನು ಬಿದ್ದಿದ್ದಾರೆ. ಹೀಗಾಗಿಯೇ ಅವರು ಕಾಂಗ್ರೆಸ್ ಗೆ ಗಡುವು ನೀಡಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X