110020karnataka rakshana vedikeಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110020karnataka rakshana vedikeಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110020karnataka rakshana vedikeಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg110020karnataka rakshana vedikeಮರಾಠಿಗರ ಸಮ್ಮೇಳನಕ್ಕೆ ಕರವೇ ವಿರೋಧ/news/2009/10/20/karave-opposes-mes-maha-melava-in-belagavi.htmlಬೆಂಗಳೂರು, ಅ.20: ಬೆಳಗಾವಿಯಲ್ಲಿ ಅ.26 ರಂದು ಎಂಇಎಸ್ ನವರು ನಡೆಸಲು ಉದ್ದೇಶಿಸಿರುವ ಮಹಾಮೇಳವಕ್ಕೆ ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕರವೇಯ ನಿಲುವಿಗೆ ಬೆಂಬಲ ಸೂಚಿಸಿರುವ ವಾಟಾಳ್ ನಾಗರಾಜ್ ಅವರು, ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುವ ಬೆದರಿಕೆ 39758http://kannada.oneindia.com/img/2009/10/20-narayangowda2.jpg110020karnataka rakshana vedikeಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg157612palace groundಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg157612palace groundಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg157612palace groundಮಧುರ ಯಾನ ಮಂಜುಳ ಗಾನ /movies/music/2009/10/14-singer-manjula-gururaj-felicitation-on-oct-30.htmlಜನಪ್ರಿಯ ಹಿನ್ನೆಲೆ ಗಾಯಕಿ ಮಂಜುಳ ಗುರುರಾಜ್  ಅವರು ತಮ್ಮ ವೃತ್ತಿ ಜೀವನದಲ್ಲಿ 25 ವಸಂತಗಳನ್ನು ಪೂರೈಸಿದ್ದಾರೆ. ಈ ಹೆಗ್ಗಳಿಕೆಗಾಗಿ ರಂಜನಿ ಕಲಾಕೇಂದ್ರವು ಅ.30ರಂದು 'ಮಧುರ ಯಾನ ಮಂಜುಳ ಗಾನ' ಶೀರ್ಷಿಕೆಯಡಿ ಸುಮಧುರ ಸಂಗೀತ ಕಾರ್ಯಕ್ರಮವನ್ನು ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ಏರ್ಪಡಿಸಿದೆ. ಕಾರ್ಯಕ್ರಮದಲ್ಲಿ ಮಂಜುಳ ಗುರುರಾಜ್  ಅವರಿಗೆ ಗೌರವ ಸಲ್ಲಿಸಲಾಗುತ್ತದೆ. ಭವ್ಯ ಸಂಗೀತ ರಾತ್ರಿ ಕಾರ್ಯಕ್ರಮದಲ್ಲಿ ಮಂಜುಳ 39686http://kannada.oneindia.com/img/2009/10/14-manjula-gururaj-janaki1.jpg157612palace groundಬೆಂಗಳೂರು : ಆರ್ಎಸ್ಎಸ್ ಸಮಾವೇಶಕ್ಕೆ ಚಾಲನೆ /news/2009/11/22/bhagwat-inugurates-rss-meet-in-bengaluru.htmlಬೆಂಗಳೂರು, ನ. 22 : ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಚಾಲನೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಘ ಪರಿಹವಾರದ ಅನೇಕ ಹಿರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ. ಸಾವಿರಾರು ಆರ್ಎಸ್ಎಸ್ ಸ್ವಯಂ ಸೇವಕರು ಸಮವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೋಹನ್ ಭಾಗವತ್ 40358http://kannada.oneindia.com/img/2009/11/22-mohan-bhagwat1.jpg157612palace groundಮುಸ್ಲಿಮರು ಮೂಲತಃ ಹಿಂದೂಗಳು : ಭಾಗವತ್/news/2009/11/23/indian-muslims-are-also-hindus-says-rss-chief.htmlಬೆಂಗಳೂರು, ಮ. 23 : ಭಾರತ ಹಿಂದೂಗಳ ರಾಷ್ಟ್ರ. ಭಾರತದಲ್ಲಿರುವ ಮುಸ್ಲಿಮರು, ಕ್ರಿಶ್ಚಿಯನ್ನರು ಮೂಲತಃ ಹಿಂದೂಗಳು. ಆದ್ದರಿಂದ ಭಾರತದಲ್ಲಿರುವ ಎಲ್ಲರೂ ಹಿಂದೂ ಧರ್ಮದ ವಿಧಿವಿಧಾನವನ್ನು ಪರಿಪಾಲಿಸುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸಲಹೆ ನೀಡಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಆರ್ಎಸ್ಎಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಅವರು, ಭಾರತವೆಂದರೆ ಹಿಂದೂಗಳ ನಾಡು ಎಂದು 40361http://kannada.oneindia.com/img/2009/11/23-mohan-bhagwat1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ | KARAVE World kannadigas awareness meet in Bengaluru- ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ - Kannada Oneindia

ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ

ಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.

ನಂತರ ನಡೆದ ಕನ್ನಡಿಗರ ಉದ್ಯೋಗ ಮತ್ತು ಉದ್ಯಮಶೀಲತೆ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಮೋಹನ್ ಆಳ್ವಾರವರು ಮಾತನಾಡಿ, ಕರ್ನಾಟಕ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕೊರತೆ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಅವು ಹೇಗೆ ಕನ್ನಡಿಗರ ಉದ್ಯಮಶೀಲತೆಯನ್ನು ಬಾಧಿಸುತ್ತಿದೆ ಎನ್ನುವುದನ್ನು ಮನಮುಟ್ಟುವಂತೆ ವಿವರಿಸಿದರು.

ಕನ್ನಡಿಗರ ಉದ್ಯೋಗ, ಉದ್ಯಮ, ಉದ್ದಿಮೆಗಾರಿಕೆಯ ಏಳಿಗೆಗೆ ಶಿಕ್ಷಣ, ಉದ್ದಿಮೆ ಇತ್ಯಾದಿ ಕ್ಷೇತ್ರಗಳಲ್ಲಿ ಸರ್ಕಾರ ಕಲ್ಪಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ, ತೆಗೆದುಕೊಳ್ಳಬೇಕಾದ ನಿಲುವಿನ ಬಗ್ಗೆ ಮಾತನಾಡಿದ ಅವರು, ರಾಜ್ಯದ ನೈಸರ್ಗಿಕ ಮತ್ತು ಮಾನವ ಸಂಪನ್ಮೂಲದ ಸದ್ಭಳಕೆ ಬಗ್ಗೆ ನೀತಿ-ನಿಯಮಗಳನ್ನು ಜಾರಿಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕ ಗಟ್ಟಿಯಾದರೆ ದೇಶ ಗಟ್ಟಿಯಾದೀತು ಎನ್ನುವ ಅವರ ಮಾತಿಗೆ ಜನ ಚಪ್ಪಾಳೆ ಮೂಲಕ ಸಮ್ಮತಿ ಸೂಚಿಸಿದರು.

ಇವರ ನಂತರ ಮಾತನಾಡಿದ ವಿಶ್ರಾಂತ ಕುಲಪತಿ ಕೆ.ಚಿದಾನಂದ ಗೌಡ ಅವರು ಜಾಗತೀಕರಣದ ಸಮಯದಲ್ಲಿ ವಿಶ್ವ ಕನ್ನಡಿಗರ ಜಾಗೃತಿಕರಣ ಆಗಬೇಕಿದ್ದು, ಇವತ್ತಿನ ಶಿಕ್ಷಣ ವ್ಯವಸ್ಥೆ, ಜ್ಞಾನವನ್ನು ಕೇವಲ ಜ್ಞಾನಕ್ಕಾಗಿ ಕೊಟ್ಟಿದೆಯೇ ಹೊರತು, ಜ್ಞಾನ ಒಂದು ಸಂಪತ್ತನ್ನು ಸೃಷ್ಟಿಸುವ, ಉದ್ಯೋಗ ಸೃಷ್ಟಿಸುವ ಶಕ್ತಿಯಾಗಿಲ್ಲ, ಇದು ಬದಲಾದಾಗಲೇ ಕನ್ನಡದ ನೆಲದಿಂದ ಉದ್ಯಮಿಗಳು, ಉದ್ಯಮಗಳು ಹುಟ್ಟಲು ಸಾಧ್ಯವಾಗುವುದು ಎಂದರು. ಕನ್ನಡ ಉಳಿಸಿ, ಬೆಳೆಸುವ ಜೊತೆಗೆಯೇ, ಆಂಗ್ಲದಲ್ಲೂ ಓದಿ ಪರಿಣಿತಿ ಗಳಿಸಿ, ಅದನ್ನುಪಯೋಗಿಸಿ, ಕನ್ನಡಕ್ಕೆ ಲಾಭ ತಂದುಕೊಡಬೇಕು ಎಂದ ಅವರು ಕೊನೆಯಲ್ಲಿ, ಕರ್ನಾಟಕದ ಅಭಿವೃದ್ಧಿಗೆ 20 ಆಯಾಮಗಳನ್ನು ಪ್ರಸ್ತುತಪಡಿಸಿದರು. ಕೊನೆಯಲ್ಲಿ ಮಾತನಾಡಿದ ಕ.ರ.ವೇ ರಾಜ್ಯಾಧ್ಯಕ್ಷರು, ರಾಜ್ಯದಲ್ಲಿ ತಲೆಯೆತ್ತುವ ಹೊಸ ಉದ್ದಿಮೆಗಳು ಈ ನೆಲದ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು, ಕನ್ನಡಿಗರಲ್ಲಿ ಉದ್ದಿಮೆಗಾರಿಕೆಯನ್ನು ಪ್ರೋತ್ಸಾಹಿಸಲು ಕನ್ನಡದ ಉದ್ಯಮಿಗಳಿಗೆ ಕಡಿಮೆ ದರ ಸಾಲ, ತೆರಿಗೆ ವಿನಾಯಿತಿಯಂತಹ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಊಟದ ವಿರಾಮದ ನಂತರ ನಡೆದ ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಜನ ಮನ ಸೂರೆಗೊಂಡವು. ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಲ್ಲೂರು ಪ್ರಸಾದ್, ಜಾಗೃತಿ ಸಮಾವೇಶವೇ ಜನಪದೋತ್ಸವ ಎಂದರಲ್ಲದೇ, ಜಾನಪದದ ಸೊಗಡಿನ ಬಗ್ಗೆ ಹಾಡಿನ ಮೂಲಕ ವಿವರಣೆ ನೀಡಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್ ಅವರು, ಕರವೇ ಹೊರ ತಂದಿರುವ ನಾಡಿನ ಜನಪದ ಸಂಸ್ಕೃತಿ ಬಿಂಬಿಸುವ ಸೀಡಿಯನ್ನು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಜಾನಪದ ಕ್ಷೇತ್ರದ ಸಾಧನೆಗಾಗಿ "ಜಾನಪದ ಜಂಗಮ ಡಾ ಎಸ್.ಕೆ. ಕರೀಂ ಖಾನ್" ಪ್ರಶಸ್ತಿಯನ್ನು ಜಾನಪದ ತಜ್ಞ ಡಾ ಎಮ್.ಎನ್. ವಾಲಿಯವರಿಗೂ ಹಾಗೂ ರೈತಪರ ಹೋರಾಟಕ್ಕಾಗಿ " ಪ್ರೊ.ಎಮ್.ಡಿ. ನಂಜುಂಡಸ್ವಾಮಿ" ಪ್ರಶಸ್ತಿಯನ್ನು ರೈತಪರ ಹೋರಾಟಗಾರರಾದ ಸಿದ್ಧವೀರಪ್ಪ ಈಚಗಟ್ಟರವರಿಗೂ ನೀಡಿ ಸನ್ಮಾನಿಸಲಾಯಿತು.

KARAVE World kannadigas awareness meet in Bengaluru.
"ಬಾಗಿಲೊಳು ಕೈ ಮುಗಿದು ಒಳಗೆ ಬಾ ಯಾತ್ರಿಕನೆ" ಎಂಬ ಹಾಡಿಗೆ ಶಿವ ಪ್ರಿಯಾ ತಂಡದ ನೃತ್ಯದ ಮೂಲಕ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಉಪಸ್ಥಿತರಿದ್ದ ನಾಡಿನ ಮುಖ್ಯಮಂತ್ರಿ ಡಾ ಬಿ.ಎಸ್.ಯಡಿಯೂರಪ್ಪನವರು ಕನ್ನಡಕ್ಕೆ ಶಾಸ್ತ್ರಿಯ ಭಾಷೆಗೆ ಹೋರಾಡಿದ ಕರ್ನಾಟಕ ರಕ್ಷಣಾ ವೇದಿಕೆಯನ್ನು ಅಭಿನಂದಿಸಿದರು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವ ವೇದಿಕೆಯ ಮಾತನ್ನು ಅನುಮೋದಿಸಿದರು. ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ನಂಜುಂಡಪ್ಪ ವರದಿ ಅನುಷ್ಟಾನಕ್ಕೆ ಪ್ರಯತ್ನಿಸುವುದಾಗಿ ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

ಸಮಾವೇಶದ ನಿರ್ಣಯಗಳು

1. ಉತ್ತಮವಾದ ಪರಿಣಾಮಕಾರಿಯಾದ ಆಡಳಿತಕ್ಕಾಗಿ, ಕೇಂದ್ರದ ಹಿಡಿತದಿಂದ ಕರ್ನಾಟಕಕ್ಕೆ ಹೆಚ್ಚಿನ ಅಧಿಕಾರ ವಿಕೇಂದ್ರೀಕರಣ ಆಗಬೇಕು.
2. ಅಂತರರಾಜ್ಯ ವಲಸೆ ನಿಯಂತ್ರಣ ಕಾಯ್ದೆ ಜಾರಿಯಾಗಲಿ.
3. ಹೊರನಾಡ ಕನ್ನಡಿಗರಿಗೆ, ಕನ್ನಡನಾಡಿನ ಪರಭಾಷಿಕರಿಗೆ ಸಿಗುವ ಸವಲತ್ತುಗಳು ಸಿಗಬೇಕು.
4. ಭಾರತದ ಎಲ್ಲಾ ಭಾಷೆಗಳನ್ನೂ ಸಮನಾಗಿ ಕಾಣುವ ರಾಷ್ಟ್ರೀಯ ಭಾಷಾನೀತಿ ರೂಪುಗೊಳ್ಳಲಿ.
5. ಗಣಿಗಾರಿಕೆ ರಾಯಲ್ಟಿಯ ಅತಿಹೆಚ್ಚು ಪಾಲು ರಾಜ್ಯಕ್ಕೇ ದೊರೆಯಬೇಕು.
6. ಕರ್ನಾಟಕಕ್ಕೆ ಸಂಪನ್ಮೂಲ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯ ಕೊನೆಯಾಗಲಿ.
7. ಅಂತರರಾಜ್ಯ ನದಿನೀರು ತಗಾದೆ ಬಗೆಹರಿಸಲು ರಾಷ್ಟ್ರೀಯ ಜಲನೀತಿ ರೂಪಿತವಾಗಲಿ.
8. ಶಾಸ್ತ್ರೀಯ ಕನ್ನಡದ ಅಧ್ಯಯನಕ್ಕೊಂದು ವಿಶ್ವವಿದ್ಯಾಲಯ ಕಟ್ಟಲಿ.
9. ಕನ್ನಡದ ಕಲಿಕೆ ಉನ್ನತ ವ್ಯಾಸಂಗಕ್ಕೂ ವಿಸ್ತರಿಸಲು ಇಂದೇ ಯೋಜನೆಗಳನ್ನು ರೂಪಿಸಬೇಕು.
10. ನಾಡಿನ ಎಲ್ಲ ಕಲಿಕಾಕೇಂದ್ರಗಳಲ್ಲಿ ಕನ್ನಡ ಕಲಿಕೆ ಕಡ್ಡಾಯವಾಗಬೇಕು.
11. ರಾಜ್ಯಸರ್ಕಾರ ಕಲಿಕೆಯಲ್ಲಿ ತ್ರಿಭಾಷಾ ಸೂತ್ರವನ್ನು ಕೈಬಿಟ್ಟು ದ್ವಿಭಾಷಾ ಸೂತ್ರವನ್ನು ಜಾರಿಗೊಳಿಸಬೇಕು.
12. ಕನ್ನಡನಾಡಿನ ಆಡಳಿತ ಸಂಪೂರ್ಣವಾಗಿ ಕನ್ನಡದಲ್ಲಾಗಬೇಕು.
13. ನಾಡದ್ರೋಹಿಗಳನ್ನು ಮಟ್ಟಹಾಕಲು ಬಿಗಿ ಭದ್ರತಾ ಕಾಯ್ದೆ ರೂಪಿಸಬೇಕು.
14. ಮಹಾಜನ ಯಥಾವತ್ತಾಗಿ ವರದಿ ಜಾರಿಯಾಗಲಿ.
15. ಹೊಗೇನಕಲ್ ಗಡಿ ತಂಟೆ ನಿವಾರಿಸಲು ಸೂಕ್ತಕ್ರಮಕ್ಕೆ ಮುಂದಾಗಬೇಕು.
16. ಗಣಿಗಾರಿಕೆಯ ನೆಪದಲ್ಲಿ ಕನ್ನಡಿಗರ ನೆಲ ಕಬಳಿಸಿ ಲೂಟಿಗೈಯ್ಯುತ್ತಿರುವ ಶಕ್ತಿಗಳನ್ನು ಹತ್ತಿಕ್ಕಲು ತಕ್ಕ ಕ್ರಮ ಕೈಗೊಳ್ಳಬೇಕು.
17. ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಮದ್ದಾದ ಡಾ. ನಂಜುಂಡಪ್ಪ ವರದಿ ಜಾರಿಗೆ ಬರಲಿ.
18. ಬಡಗಣ ಕರ್ನಾಟಕದ ("ಹೈದರಾಬಾದ್ ಕರ್ನಾಟಕ" ಎಂದು ಕರೆಯುವುದು ಸರಿಯಲ್ಲ) ಏಳಿಗೆಗೆ ಪೂರಕವಾಗಿರುವ 371ನೇ ವಿಧಿಯನ್ವಯ ಆ ಭಾಗಗಳಿಗೆ ವಿಶೇಷ ಸ್ಥಾನಮಾನ ಘೋಷಿಸಬೇಕು.
19. ಭ್ರಷ್ಟಾಚಾರ ಕೊನೆಗೊಳಿಸಲು ಬಿಗಿ ಕಾನೂನು ರೂಪಿಸಬೇಕು.
20. ನಾಡಿನ ನಗರಗಳನ್ನು ಜೋಡಿಸುವ ರಸ್ತೆ, ರೈಲು ವಿಮಾನ ಸಂಪರ್ಕ ಜಾಲಗಳನ್ನು ಆದ್ಯತೆಯ ಮೇಲೆ ಕಟ್ಟಬೇಕು.
21. ನೆನೆಗುದಿಗೆ ಬಿದ್ದಿರುವ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೆ ತರಬೇಕು.
22. ಕನ್ನಡಿಗರಿಗೆ ಕೆಲಸ ಖಾತ್ರಿ ಪಡಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ.
23. ಕರ್ನಾಟಕದಲ್ಲಿ ಕೆಲಸ ಮಾಡುವ ಕೇಂದ್ರಸರ್ಕಾರಿ ಕಛೇರಿಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.91 ಮೀಸಲಾತಿ ಕೊಡಬೇಕು.
24. ಕೇಂದ್ರ ಸರ್ಕಾರ ನಡೆಸುವ ನೇಮಕಾತಿ ಪರೀಕ್ಷೆಗಳು ಕನ್ನಡದಲ್ಲಿ ಇರಲೇಬೇಕು.
25. ಕರ್ನಾಟಕ ರಾಜ್ಯ ಸರ್ಕಾರದ ಕೆಲಸಗಳಲ್ಲಿ ಶೇ.100 ಕನ್ನಡಿಗರಿಗೇ ಸಿಗಬೇಕು.
26. ಕನ್ನಡಿಗರಲ್ಲಿ ಉದ್ದಿಮೆಗಾರಿಕೆ ಉತ್ತೇಜಿಸಲು ಮೂಲಧನ ನೀಡುವ ವ್ಯವಸ್ಥೆ ರೂಪುಗೊಳ್ಳಲಿ.
27. ಕನ್ನಡದಲ್ಲಿ ಗ್ರಾಹಕ ಸೇವೆ ನಿರಾಕರಿಸುವುದು ಶಿಕ್ಷಾರ್ಹ ಅಪರಾಧವೆನ್ನುವ ಕಾಯ್ದೆ ಜಾರಿಯಾಗಲಿ.
28. ಸಂಕಷ್ಟದಲ್ಲಿರುವ ಕನ್ನಡ ನಾಡಿನ ಎಲ್ಲ ರೈತ, ಕಾರ್ಮಿಕ, ನೇಕಾರ ಕುಟುಂಬಗಳಿಗೆ ಸೂಕ್ತವಾದ ಪರಿಹಾರವನ್ನು ಸಕಾಲದಲ್ಲಿ ವಿತರಿಸಬೇಕು.
29. ಕರ್ನಾಟಕದಲ್ಲಿ ರೂಪಿಸಲಿರುವ ಅಭಯಾರಣ್ಯಗಳ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸಬಾರದು ಮತ್ತು ಸೂಕ್ತಪರಿಹಾರ ನೀಡಬೇಕು.
30. ಪ್ರವಾಸೋದ್ಯಮದ ಬೆಳವಣಿಗೆಗೆ ಆದ್ಯತೆ ನೀಡಿ ಸ್ಥಳೀಯ ಕನ್ನಡಿಗರ ಸಹಭಾಗಿತ್ವದಲ್ಲಿ ಲಾಭದಾಯಕ ಉದ್ದಿಮೆಯಾಗಿ ರೂಪಿಸಲು ಯೋಜನೆಗಳನ್ನು ಮಾಡಬೇಕು.
31. ಕನ್ನಡ ನಾಡಿನ ಊರು, ಕೇರಿ, ಬೀದಿಗಳು, ಅಣೆಕಟ್ಟೆಗಳೂ ಸೇರಿದಂತೆ ಎಲ್ಲಾ ತೆರನಾದ ಯೋಜನೆಗಳು, ಸ್ಮಾರಕಗಳಿಗೆ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಸಂಬಂಧಿಸಿದ ಹೆಸರುಗಳನ್ನು ಮಾತ್ರ ಇಡಬೇಕು. ಪರಂಪರೆಯಿಂದ ಬಂದಿರುವ ಹಳೆಯ ಮೂಲಹೆಸರುಗಳನ್ನೇ ಆದಷ್ಟೂ ಅಧಿಕೃತಗೊಳಿಸಬೇಕು.
32. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ಇಡಬೇಕು. ಜೊತೆಯಲ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ವಿಮಾನ ನಿಲ್ದಣವೆಂದೂ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣವೆಂದೂ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನನಿಲ್ದಾಣವೆಂದೂ ಹೆಸರಿಡಬೇಕು.
33. ವಿಜಾಪುರದ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ವಿಶ್ವವಿದ್ಯಾಲಯವೆಂಬ ಹೆಸರಿಡಬೇಕು.
34. ಕೊಡಗು ಜಿಲ್ಲೆಯನ್ನು ರೈಲುಮಾರ್ಗದಿಂದ ಸಜ್ಜುಗೊಳಿಸಿ ಅಲ್ಲಿ ಉದ್ದಿಮೆಗಾರಿಕೆಗೆ ಉತ್ತೇಜನ ನೀಡುವ ಯೋಜನೆ ಮಾಡಬೇಕು.
35. ಈಗಾಗಲೇ ಇರುವ ಉನ್ನತ ಕಲಿಕಾ ಕೇಂದ್ರಗಳಾದ ಭಾರತೀಯ ವಿಜ್ಞಾನ ಸಂಸ್ಥೆ, ಕೃಷಿ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣದ ಲಾಭ ಕನ್ನಡಿಗರಿಗೇ ಆದ್ಯತೆಯ ಮೇರೆಗೆ ದೊರೆಯಬೇಕು.
36. ಕನ್ನಡ ನಾಡಿನ ಸಂಸ್ಕೃತಿಯ ಪ್ರತೀಕಗಳಾದ ಜಾನಪದ, ಯಕ್ಷಗಾನ, ರಂಗಭೂಮಿ ಕಲೆಗಳ ಉಳಿವು ಮತ್ತು ಏಳಿಗೆಗಾಗಿ ಸಂಬಂಧಿಸಿದ ಅಕಾಡಮಿಗಳನ್ನು ಪುನಶ್ಚೇತನಗೊಳಿಸಬೇಕು. ಪ್ರತಿಭಾನ್ವಿತ ಜಾನಪದ ಕಲಾವಿದರಿಗೆ ಮಾಸಾಶನ ನೀಡಬೇಕು.
37. ಮಹಿಳೆಯರ ಸಬಲೀಕರಣಕ್ಕೆ ಪೂರಕವಾದ ಸ್ತ್ರೀ ಶಕ್ತಿ ಯೋಜನೆಯನ್ನು ಬಲಪಡಿಸಬೇಕು.
38. ರಾಷ್ಟ್ರೀಯ ಆಟದ ತಂಡಗಳಲ್ಲಿ ಕನ್ನಡದ ಆಟಗಾರರಿಗೆ ಅನ್ಯಾಯವಾಗದಂತೆ ಎಚ್ಚರವಹಿಸಬೇಕು ಮತ್ತು ಆಯಾ ಕ್ರೀಡಾಸಂಸ್ಥೆಗಳಲ್ಲಿ ಕನ್ನಡಿಗ ಪ್ರತಿನಿಧಿಗಳು ಇರಬೇಕು.
39. ಬೆಳಗಾವಿಯಲ್ಲಿ ನಿರ್ಮಾಣವಾಗುತ್ತಿರುವ ಸುವರ್ಣ ವಿಧಾನಸೌಧವನ್ನು ಶೀಘ್ರವಾಗಿ ಪೂರೈಸಬೇಕು.
40. ಕರ್ನಾಟಕದ ಏಕೈಕ ಕಾನೂನು ವಿಶ್ವವಿದ್ಯಾಲಯದ ವಿಸ್ತೃತ ಕೇಂದ್ರವನ್ನು ಉತ್ತರ ಕರ್ನಾಟಕದಲ್ಲೂ ತೆರೆಯಬೇಕು.
41. ಕರಾವಳಿ ಜಿಲ್ಲೆಗಳ ಆದಾಯದ ಮೂಲವಾದ ಮೀನುಗಾರಿಕೆಯ ಉತ್ತೇಜನಕ್ಕೆ ಮತ್ತು ಮೀನುಗಾರರ ರಕ್ಷಣೆಗೆ ಕಡಿಮೆ ಬಡ್ದಿದರದಲ್ಲಿ ಸಾಲನೀಡುವ ಮತ್ತು ಅವರ ಬದುಕಿನ ಭದ್ರತೆಗೆ ಸೂಕ್ತ ವಿಮೆಯನ್ನು ಸರ್ಕಾರ ಕೊಡಬೇಕು.
42. ಕನ್ನಡ ನಾಡಿನ ವಿಶಿಷ್ಟ ಜನಾಂಗಗಳಾದ ಹಾಲಕ್ಕಿಯವರೂ, ಸೋಲಿಗರೂ ಸೇರಿದಂತೆ ಎಲ್ಲ ಜನಾಂಗಗಳು, ತಮ್ಮ ಮೂಲನೆಲೆಯನ್ನು ಕಳೆದುಕೊಳ್ಳದಂತೆ ಸರ್ವತೋಮುಖ ಏಳಿಗೆಗೆ ಯೋಜನೆಗಳನ್ನು ರೂಪಿಸಬೇಕು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+