ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಜನತೆ, ಶಾಸಕರಿಗೆ ಸೂಕ್ತ ರಕ್ಷಣೆ: ಸಿಎಂ

By Staff
|
Google Oneindia Kannada News

ಬೆಳಗಾವಿ, ಜ. 20 : ರಾಜ್ಯದಲ್ಲಿ ಎಲ್ಲಾ ಶಾಸಕರಿಗಷ್ಟೇ ಅಲದ್ಲೇ ಸಮಸ್ತ ಜನತೆಗೆ ಸೂಕ್ತ ರಕ್ಷಣೆ ನೀಡಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಸಭೆಯಲ್ಲಿಂದು ತಿಳಿಸಿದರು.

ಭದ್ರಾವತಿಯ ಮಾರಿಕಾಂಬ ದೇವಸ್ಥಾನದ ಜಾತ್ರೆ ಸಂದರ್ಭದಲ್ಲಿ ಶಾಸಕರಾದ ಸಂಗಮೇಶ್ ಅವರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಸದನಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಶಾಸಕರು ಸೇರಿದಂತೆ ರಾಜ್ಯದ ಜನತೆಗೆ ಸೂಕ್ತ ಭದ್ರತೆ ನೀಡುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ ಅವರು, ನನಗೆ ಮತ್ತು ನನ್ನ ಕ್ಷೇತ್ರದ ಜನತೆಗೆ ರಕ್ಷಣೆ ಕೋರಿ ಸದನದಲ್ಲಿ ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ಪ್ರತಿಪಕ್ಷದ ಬಹುತೇಕ ಸದಸ್ಯರು ಈ ವಿಷಯಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಗಮನಸೆಳೆದ ಮೇರೆಗೆ, ಮಾನ್ಯ ಮುಖ್ಯಮಂತ್ರಿಗಳು ಶಾಸಕರಿಗೆ ಭದ್ರತೆ ಒದಗಿಸುವುದರ ಜೊತೆಗೆ ಈ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು.

ರಾಜ್ಯದಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸಲು ಸ್ವಾಮಿ ವಿವೇಕಾನಂದರ ದಿನಾಚರಣೆಯಂದು ಭಯೋತ್ಪಾದನಾ ನಿರ್ಮೂಲನಾ ಆಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದ ಮುಖ್ಯ ಮಂತ್ರಿಗಳು, ಸ್ವಾಮಿ ವಿವೇಕಾನಂದರು ಇಡೀ ದೇಶದ ಸ್ವತ್ತು. ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಯುವ ದಿನವೆಂದು ಆಚರಿಸಲು ಚಿಂತಿಸಲಾಗಿದೆ. ಯುವಕರಲ್ಲಿ ದೇಶ ರಕ್ಷಣೆ, ಭಯೋತ್ಪಾದನಾ ನಿರ್ಮೂಲನೆ ಮಾಡುವಂತ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಅವರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಲಾಗುವುದು ಎಂದು ಸದನದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)
ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X