39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಬೆಳಗಾವಿ ಪ್ರವಾಸೋದ್ಯಮಕ್ಕೆ 50 ಕೋಟಿ ರು | Rs 50 cr to develop tourism in Belgaum - ಬೆಳಗಾವಿ ಪ್ರವಾಸೋದ್ಯಮಕ್ಕೆ 50 ಕೋಟಿ ರು - Kannada Oneindia

ಬೆಳಗಾವಿ ಪ್ರವಾಸೋದ್ಯಮಕ್ಕೆ 50 ಕೋಟಿ ರು

ಬೆಳಗಾವಿ. ಜ . 25 : ಬೆಳಗಾವಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಂಪರ್ಕ ರಸ್ತೆ, ಸಾರಿಗೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಮೂಲಭೂತಸೌಕರ್ಯಗಳ ಸಚಿವರಾದ ಬಿ.ಜನಾರ್ಧನ ರೆಡ್ಡಿ ಅವರು ಇಂದು ಇಲ್ಲಿ ತಿಳಿಸಿದರು.

ಮಾಧ್ಯಮಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬೆಳಗಾವಿ ಬಳಿಯ ರಾಜಹಂಸಗಡ ಕೋಟೆಯನ್ನು ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜನ್ಮಸ್ಥಳವಾದ ಕಾಕತಿ ಗ್ರಾಮವನ್ನು ಪ್ರವಾಸಿತಾಣವನ್ನಾಗಿ ಅಭಿವೃದ್ಧಿಗೊಳಿಸಲಾಗುವುದು ಹಾಗೂ ಈ ಎರಡೂ ಸ್ಥಳಗಳಲ್ಲಿ ಇತಿಹಾಸ ಬಿಂಬಿಸುವ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮಗಳನ್ನು ಸಹ ನಡೆಸಲಾಗುವುದು. ಬೆಳಗಾವಿಯ ಇತಿಹಾಸ ಪ್ರಸಿದ್ದ ಕಿತ್ತೂರು ಕೋಟೆ, ಕಾಕತಿ, ಪ್ರೇಕ್ಷಣೀಯ ಸ್ಥಳಗಳಾದ ಗೋಕಾಕ್ ಜಲಪಾತ, ನವಿಲುತೀರ್ಥ, ಹಿಡಕಲ್ ಜಲಾಶಯಗಳಿಗೆ ಮತ್ತು ಗೊಡಚಿ ಹಾಗೂ ಸೌದತ್ತಿಯ ಧಾರ್ಮಿಕ ಕ್ಷೇತ್ರಗಳ ಭೇಟಿಗಾಗಿ ಕೆಎಸ್‌ಟಿಡಿಸಿ ಬಸ್‌ಗಳ ಪ್ರವಾಸವನ್ನು ಏರ್ಪಡಿಸಲಾವುದು ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಮೂರು ತಿಂಗಳೊಳಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒದಗಿಸಿ, ಪೂರ್ಣ ಪ್ರಮಾಣದ ಕಚೇರಿ ಕಾರ್ಯಪ್ರವೃತ್ತವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಇಲಾಖೆ ಕಚೇರಿ ಹಾಗೂ ಈ ಕಚೇರಿಗೆ ಅವಶ್ಯಕವಾದ ಅಧಿಕಾರಿ ಹಾಗೂ ಸಿಬ್ಬಂದಿವರ್ಗವನ್ನು ನೇಮಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ೪೧೨ ಜನ ಅಧಿಕಾರಿಗಳನ್ನು ನೇಮಕಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಹೆಲಿ ಪ್ರವಾಸೋದ್ಯಮ ( ಹೆಲಿ ಟೂರಿಸಂ) ಪ್ರಕ್ರಿಯೆ ಪ್ರಾರಂಭವಾಗಿದ್ದು, ಆನಂದ ಸಿಂಗ್ ಹಾಗೂ ಇಕ್ಬಾಲ್ ಅಹಮದ್ ಅವರು ೧೦ ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಹಣವನ್ನು ತುಂಬಿದ್ದು, ಅದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಿದೆ ಎಂದರು. ರಾಜ್ಯದ ಪ್ರವಾಸಿ ಹಾಗು ಪಾರಂಪರಿಕ ತಾಣಗಳಲ್ಲಿ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಸ್ವಾಧೀನ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು.

ಪ್ರತಿ ಜಿಲ್ಲೆಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹ ಕ್ರಮಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಕರಾವಳಿ ಪ್ರದೇಶಗಳಲ್ಲಿ ಈ ಪ್ರಕ್ರಿಯೆ ಆರಂಭಗೊಂಡಿದೆ.

(ದಟ್ಸ್ ಕನ್ನಡ ವಾರ್ತೆ)
ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+