ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಮೋದ ಮುತಾಲಿಕ್ ಬೆಳಗಾವಿಯಲ್ಲಿ ಬಂಧನ

By Staff
|
Google Oneindia Kannada News

ಬೆಳಗಾವಿ, ಜ. 27 : ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರನ್ನು ಬೆಳಗಾವಿ ಪೊಲೀಸರು ಮಂಗಳವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಕಳೆದ ಶನಿವಾರ ಮಂಗಳೂರು ಪಬ್ ವೊಂದರ ಮೇಲೆ ಶ್ರೀರಾಮಸೇನೆ ಸಂಘಟನೆ ನಡೆಸಿದ ದಾಳಿ ದೇಶಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಗ್ರಾಸವಾಗಿರುವ ಮಂಗಳೂರು ಪ್ರಕರಣ, ರಾಜಕೀಯದ ಬಣ್ಣ ಬಳಿದುಕೊಂಡಿತ್ತು. ಇಂದು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ಬೆಳಗಾವಿ ಪೊಲೀಸರು ಪ್ರಮೋದ ಮುತಾಲಿಕ್ ಅವರನ್ನು ಬಂಧಿಸಿದ್ದಾರೆ. ದಾವಣಗೆರೆ ಗಲಭೆ ಹಾಗೂ ಕೆಲವಡೆ ಪ್ರಚೋದನಾ ಭಾಷಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಸೋನಿಯಾ ನಾರಂಗ್ ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ಮಂಗಳೂರು ಘಟನೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಗೂಂಡಾಗಿರಿ ವರ್ತನೆ ನಡೆಸಿದ್ದರೆ ಅದು ತಪ್ಪು, ಅದನ್ನು ನಾವು ಕೂಡ ಒಪ್ಪುವುದಿಲ್ಲ. ಆದರೆ, ನಮ್ಮ ಯವಕ ಯುವತಿಯರು ಪಬ್ ಸಂಸ್ಕೃತಿಗೆ ಮಾರು ಹೋಗುತ್ತಿರುವುದು ಎಷ್ಟು ಸರಿ. ಸಂಘಟನೆ ದಾಳಿ ನಡೆಸಿದ ಉದ್ದೇಶವನ್ನು ಯಾರೂ ಪ್ರಸ್ತಾಪಿಸುತ್ತಿಲ್ಲ. ಆದರೆ, ಅವರ ಮೇಲೆ ನಡೆದ ದಾಳಿ ಬಗ್ಗೆ ಮಾತ್ರ ಎಲ್ಲರೂ ಮಾತನಾಡುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಮೂರು ದಿನಗಳಿಂದ ಮಾದ್ಯಮಗಳು ದಾಳಿ ದೃಶ್ಯಗಳನ್ನು ತೋರಿಸಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದು ಕಿಡಿಕಾರಿದ ಅವರು, ಅದರ ಉದ್ದೇಶ ಮಾದ್ಯಮಗಳಿಗೂ ಬೇಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮಾಜಕ್ಕೆ ಒಳಿತನ್ನು ಬಯಸುತ್ತಿರುವ ಸಂಘಟನೆ ಕಾರ್ಯ ನಿರಂತರವಾಗಿ ಮುಂದುವರೆಯಲಿದೆ. ಪಬ್ ಸಂಸ್ಕೃತಿ ವಿರುದ್ಧ ಹೋರಾಟ ನಿಲ್ಲಲು ಸಾಧ್ಯವಿಲ್ಲ ಎಂದು ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಘಟನೆ, ಸಿಎಂ ರಾಜೀನಾಮೆಗೆ ಆಗ್ರಹ
ಪಬ್ ದಾಳಿ ಶ್ರೀರಾಮ ಸೇನೆ ಸಂಚಾಲಕ ಬಂಧನ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X