ಪಬ್ ಸಂಸ್ಕೃತಿಗೆ ಅವಕಾಶ ನೀಡುವುದಿಲ್ಲ: ಸಿಎಂ
ಬೆಂಗಳೂರು, ಜ 29: ರಾಜ್ಯದಲ್ಲಿ ಪಬ್ ಸಂಸ್ಕೃತಿ ಬೆಳೆಯಲು ಅವಕಾಶ ನೀಡುವುದಿಲ್ಲ ಹಾಗೇ ಈ ಸಂಬಂಧ ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಘಟನೆ ದುರದೃಷ್ಟಕರ ಹಾಗೂ ಈ ಘಟನೆಗೆ ಸಂಬಂಧ ಪಟ್ಟಂತೆ ಶ್ರೀರಾಮಸೇನೆಯನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶ್ರೀರಾಮಸೇನೆ ಕಾರ್ಯಕರ್ತರು ಮಂಗಳೂರಿನ ಅಮ್ನೇಶಿಯ ಪಬ್ ದಾಳಿ ಸಂದರ್ಭದಲ್ಲಿ ಯುವತಿಯರ ಜೊತೆ ನಡೆದುಕೊಂಡ ರೀತಿ ಖಂಡನೀಯ. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸುತ್ತೇವೆ, ಕಾನೂನಿನ ಎದುರು ಯಾರೂ ದೊಡ್ಡವರಲ್ಲ ಪಬ್ ದಾಳಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಸುವ ಬಗ್ಗೆಯೂ ಆಲೋಚನೆ ನಡೆಸಲಾಗುತ್ತಿದೆ ಎಂದರು. ಪ್ರಮೋದ್ ಮುತಾಲಿಕ್ ಸೇರಿದಂತೆ ಈವರೆಗೆ 33 ಮಂದಿಯನ್ನು ಬಂಧಿಸಲಾಗಿದೆ ಹಾಗು ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಬಿಜೆಪಿಗೂ ಶ್ರೀರಾಮಸೇನೆಗೂ ಯಾವುದೇ ಸಂಬಂಧ ಇಲ್ಲ. ಅದು ಒಂದು ಸ್ವತಂತ್ರವಾದ ಸಂಘಟನೆ ಎಂದು ಹೇಳಲು ಮುಖ್ಯಮಂತ್ರಿಗಳು ಮರೆಯಲಿಲ್ಲ.
(ದಟ್ಸ್ ಕನ್ನಡ ವಾರ್ತೆ)
ಪಬ್ ದಾಳಿ ಶ್ರೀರಾಮ ಸೇನೆ ಸಂಚಾಲಕ ಬಂಧನ
ಮಂಗಳೂರು ಘಟನೆ, ಸಿಎಂ ರಾಜೀನಾಮೆಗೆ ಆಗ್ರಹ












Click it and Unblock the Notifications