ಅಗ್ಗವಾಗಲಿದೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಪ್ರಯಾಣ ದರ
ಮೈಸೂರು, ಜ.30: ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರವನ್ನೂ ಕಡಿಮೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಗುರುವಾರ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ಪೆಟ್ರೋಲ್ ಬೆಲೆಯನ್ನು ರು.5 ಮತ್ತು ಡೀಸೆಲ್ ಬೆಲೆಯನ್ನು ರು.2 ಕಡಿಮೆ ಮಾಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಶೀಘ್ರದಲ್ಲೇ ಪ್ರಯಾಣ ದರ ಕಡಿಮೆ ಮಾಡುವ ಸಂಬಂಧ ಆದೇಶ ಹೊರಡಿಸಲಾಗುತ್ತದೆ ಎಂದರು.
ಆದರೆ ಪ್ರಯಾಣ ದರವನ್ನು ಎಷ್ಟು ಪ್ರಮಾಣದಲ್ಲಿ ಇಳಿಕೆ ಮಾಡಲಾಗುತ್ತದೆ ಎಂಬುದನ್ನು ಸಚಿವರು ತಿಳಿಸಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ನಿರ್ಧರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಪ್ರಯಾಣಿಕರ ನಿರೀಕ್ಷೆಗೆ ತಕ್ಕಂತೆ ಪ್ರಯಾಣ ದರ ಕಡಿಮೆಯಾಗಲಿದೆ ಎಂಬ ಸುಳಿವು ಸಚಿವರಿಂದ ದೊರೆಯಿತು.
(ದಟ್ಸ್ ಕನ್ನಡ ವಾರ್ತೆ)
ಪೆಟ್ರೋಲ್, ಡೀಸೆಲ್, ಎಲ್ಪಿಜಿ ದರಗಳಲ್ಲಿ ಕಡಿತ












Click it and Unblock the Notifications