ಆರ್ಎಸ್ಎಸ್. ಎಬಿವಿಪಿ ಉಗ್ರರ ಸಂಘಟನೆ: ಡಿಕೆಶಿ

ಬೆಂಗಳೂರು, ಫೆ. 3 : ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಬಿಜೆಪಿ, ಆರ್ ಎಸ್ ಎಸ್ ಹಾಗೂ ಎಬಿವಿಪಿ ಕಾರ್ಯಕರ್ತರೆ ನಿಜವಾದ ಭಯೋತ್ಪಾದಕರು ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು. ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಯೋತ್ಪಾದನೆ ವಿರುದ್ಧ ಜನಜಾಗೃತಿ ಜಾಥಾ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ವಿದ್ಯಾರ್ಥಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಯೋತ್ಪಾದನೆ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನೆಪದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪಕ್ಷದ ಮತ್ತು ಆರ್ ಎಸ್ಎಸ್ ತತ್ವಗಳನ್ನು ಬೋಧಿಸಲು ಹುನ್ನಾರ ನಡೆಸಿದೆ. ತನ್ನ ಬೇಳೆ ಬೇಯಿಸಿಕೊಳ್ಳಲು ಸರ್ಕಾರ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತತೊಡಗಿರುವುದು ದೊಡ್ಡ ಅಪರಾಧ. ಇದನ್ನು ಕೂಡಲೇ ನಿಲ್ಲಿಸಬೇಕು, ಇಲ್ಲವಾದರೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಶಿವಕುಮಾರ್ ಎಚ್ಚರಿಕೆ ನೀಡಿದರು.

ಜಾಗೃತಿ ಕಾರ್ಯಕ್ರಮಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಕಳುಹಿಸಬೇಕೆಂದು ಪ್ರಾಂಶುಪಾಲರಿಗೆ, ಕುಲಪತಿಗಳಿಗೆ, ಖಾಸಗಿ ಶಾಲಾ ಆಡಳಿತ ಮಂಡಳಿಗೆ ಸರ್ಕಾರ ಸೂಚನೆ ನೀಡಿದೆ. ಒಟ್ಟಾರೆಯಾಗಿ ಶಾಲಾ ಕಾಲೇಜುಗಳನ್ನು ಕೇಸರೀಕರಣ ಮಾಡಲು ಹೊರಟಿದೆ ಎಂದು ಅವರು ದೂರಿದರು.

(ದಟ್ಸ್ ಕನ್ನಡ ವಾರ್ತೆ)
ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ
ಪಬ್ ಸಂಸ್ಕೃತಿಗೆ ಅವಕಾಶ ನೀಡುವುದಿಲ್ಲ: ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+