ನರಭಕ್ಷಕ ಮಣಿಂದರ್ , ಸುರಿಂದರ್ ಗೆ ಮರಣದಂಡನೆ
ಗಾಜಿಯಾಬಾದ್, ಫೆ. 13 : ನಿತಾರಿ ಸರಣಿ ಕೊಲೆಯಲ್ಲಿ ಅಪರಾಧಿಯಾಗಿದ್ದ ಮಣಿಂದರ್ ಸಿಂಗ್ ಪಂಧೇರ್ ಹಾಗೂ ಸುರಿಂದರ್ ಕೊಲಿಗೆ ಇಂದು ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ಅನೇಕ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣ ಸರಣಿ ಹತ್ಯಾ ಪ್ರಕರಣವೊಂದು ಅಂತ್ಯಗೊಂಡಂತಾಗಿದೆ.
ನಿತಾರಿ ಸರಣಿ ಕೊಲೆಯಲ್ಲಿ ಸುರಿಂದರ್ ಕೊಲಿ ಹಾಗೂ ಮಣಿಂದರ್ ಸಿಂಗ್ ಪಂಧೇರ್ ಇಬ್ಬರು 14 ವರ್ಷ ರಿಂಪಾ ಹಲ್ದಾರ್ ಎನ್ನುವ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊನೆಗೆ ಹತ್ಯೆ ಮಾಡಿರುವುದು ಸೇರಿ ಒಟ್ಟು 19 ಪ್ರಕರಣಗಳಲ್ಲಿ ಸಿಬಿಐ ಭೇದಿಸಿತ್ತು. ಗುರುವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಈ ಇಬ್ಬರು ಆರೋಪಿಗಳನ್ನು ಅಪರಾಧಿಗಳೆಂದು ಹೇಳಿತ್ತು. ಶಿಕ್ಷೆ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ಹೇಳಿತ್ತು.
ಇಂದು ಅಂತಿಮ ಹಂತದ ವಿಚಾರಣೆಯನ್ನು ಕೇವಲ ಅರ್ಧ ಗಂಟೆಯಲ್ಲಿ ಮುಗಿಸಿದ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿಗಳಾದ ರಾಮ್ ಜೈನ್ ಅವರು ಇಬ್ಬರೂ ಆಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಘೋಷಿಸಿದ್ದಾರೆ. ಇದಕ್ಕೂ ಮುನ್ನ ಸಿಬಿಐ ಪರ ವಕೀಲ ಪಿಸಿ ಅಹ್ಲುವಾಲಿಯಾ ಅವರು, ಈ ಇಬ್ಬರು ಬದುಕಿರಲು ಯೋಗ್ಯರಲ್ಲ. 18 ಮಕ್ಕಳನ್ನು ಕೊಂದಿರುವ ಇವರು, ರಿಂಪಾ ಹಲ್ದಾರ್ ಎನ್ನುವ 14 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಅಪರಾಧಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ. ಆದ್ದರಿಂದ ಘನ ನ್ಯಾಯಾಲಯ ಅವರಿಗೆ ಉಗ್ರ ಶಿಕ್ಷೆಯನ್ನು ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಉತ್ತರ ಪ್ರದೇಶದ ನೊಯ್ಡಾದ ಬಳಿ ಇರುವ ನಿತಾರಿ ಎನ್ನುವ ಗ್ರಾಮದವನಾದ ಮಣಿಂದರ್ ಪಂಧೇರ್, ತನ್ನ ಮನೆಯಲ್ಲಿ ಈ ಕೃತ್ಯ ಎಸಗಿದ್ದ.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications