ನಗರದ ಎಲೆಕ್ಟ್ರಾನಿಕ್ ವಸ್ತುಗಳ ಗೋದಾಮಿಗೆ ಬೆಂಕಿ
ಬೆಂಗಳೂರು, ಫೆ. 13 : ಎಲೆಕ್ಟ್ರಾನಿಕ್ ಗೋದಾಮುವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಕಬ್ಬನ್ ಪೇಟೆ ಮಳಿಗೆಯೊಂದರಲ್ಲಿ ಶುಕ್ರವಾರ ಬೆಳಗ್ಗೆ 8.15ರ ಸುಮಾರಿಗೆ ನಡೆದಿದೆ.
ಕಬ್ಬನ್ ಪೇಟೆಯ ಪುಟ್ಟಪ್ಪ ಎಂಬ ಹೆಸರಿನ ಮೂರು ಅಂತಸ್ತಿನ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಟ್ಟಡದ ಮೂರನೇ ಅಂತಸ್ತಿನಲ್ಲಿ ಹಳೆಯ ಟಿವಿ ಹಾಗೂ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕವಾಗಿ ಬೆಂಕಿ ಹತ್ತಿದ್ದರಿಂದ ಅಲ್ಲಿರುವ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಬೆಂಕಿಯನ್ನು ನಂದಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications