ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ!

By Staff
|
Google Oneindia Kannada News

*ಟಿ ಜಿ ಶ್ರೀನಿಧಿ,ಮೈಸೂರು

ಮೈಸೂರು, ಫೆ. 13 : ಕಳೆದ ವಾರದಲ್ಲಿ ಹೆಚ್ಚೂಕಡಿಮೆ ಪ್ರತಿ ದಿವಸವೂ ಕೇಳಿಬರುತ್ತಿರುವ ವಿಮಾನ ಅಪಘಾತ ಕೊಂಚದರಲ್ಲೇ ತಪ್ಪಿದ ಸುದ್ದಿಗಳ ನಡುವೆ ಈಗ ವಿಮಾನಗಳ ತಲೆ ಮೇಲೆ ಮೇಲೆ ಹಾರಾಡುವ ಉಪಗ್ರಹಗಳು ಅಪಘಾತಕ್ಕೀಡಾದ ಸುದ್ದಿ ಕೇಳಿಬಂದಿದೆ.

ಕಳೆದ ಮಂಗಳವಾರ ಸಂಭವಿಸಿದ ಘಟನೆಯೊಂದರಲ್ಲಿ ಬಾಹ್ಯಾಕಾಶದಲ್ಲಿ ರೌಂಡು ಹೊಡೆಯುತ್ತಿದ್ದ ಅಮೆರಿಕಾ ಹಾಗೂ ರಷ್ಯಾದ ಉಪಗ್ರಹಗಳು ಮುಖಾಮುಖಿ ಡಿಕ್ಕಿಹೊಡೆದಿವೆ. ಅಂತರಿಕ್ಷದ ಇಂತಹ ಮೊದಲ ಅಪಘಾತ ಎಂದು ಗುರುತಿಸಲಾಗಿರುವ ಈ ಘಟನೆ ಸೈಬೀರಿಯಾದ ಮೇಲೆ ಭೂಮಿಯಿಂದ ಸುಮಾರು 780 ಕಿಲೋಮೀಟರುಗಳ ಎತ್ತರದಲ್ಲಿ ಸಂಭವಿಸಿದೆ.

ಈಗಾಗಲೇ ನಿಷ್ಕ್ರಿಯವಾಗಿತ್ತು ಎನ್ನಲಾಗಿರುವ ಹೆಚ್ಚೂಕಡಿಮೆ ಸಾವಿರ ಕೆಜಿ ತೂಕದ ರಷ್ಯಾದ ಉಪಗ್ರಹ 1993ರಲ್ಲಿ ಉಡಾವಣೆಯಾಗಿತ್ತಂತೆ. ಅಪಘಾತದಲ್ಲಿ ಭಾಗಿಯಾಗಿರುವ
560ಕಿಲೋ ತೂಕದ ಇನ್ನೊಂದು ಉಪಗ್ರಹ ಅಮೆರಿಕಾದ ಇರಿಡಿಯಂ ಸಂಸ್ಥೆಗೆ ಸೇರಿದ್ದು 1997ರಲ್ಲಿ ಉಡಾವಣೆಯಾಗಿತ್ತು. ಇದು ಇರಿಡಿಯಂ ಸಂಸ್ಥೆ ಒದಗಿಸುವ ಉಪಗ್ರಹ ದೂರವಾಣಿ ಸೇವೆಗಾಗಿ ಬಳಕೆಯಾಗುತ್ತಿದ್ದ ಅನೇಕ ಉಪಗ್ರಹಗಳಲ್ಲಿ ಒಂದು.

ಈ ಉಪಗ್ರಹಗಳು ಅಪಾರ ವೇಗದಲ್ಲಿ ಒಂದಕ್ಕೊಂದು ಡಿಕ್ಕಿ ಹೊಡೆದಿರುವುದರಿಂದ ಅವೆರಡೂ ನುಚ್ಚುನೂರಾಗಿದ್ದು ಧೂಳು ಹಾಗೂ ಚೂರುಗಳ ದೊಡ್ಡದೊಂದು ಮೋಡವೇ ಸೃಷ್ಟಿಯಾಗಿದೆ. ಈ ಚೂರುಗಳು ಭೂಮಿಯ ವಾತಾವರಣ ಪ್ರವೇಶಿಸಿ ಉರಿದು ಬೂದಿಯಾದರೆ ಪರವಾಗಿಲ್ಲ, ಹಾಗಾಗದೆ ಅವೇನಾದರೂ ಅಂತರಿಕ್ಷದಲ್ಲೇ ಉಳಿದುಕೊಂಡರೆ ಇತರ ಉಪಗ್ರಹಗಳು ಹಾಗೂ ಅಂತರಿಕ್ಷಯಾನಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

1957ರಿಂದ ಈಚೆಗೆ ಉಡಾವಣೆಯಾಗಿರುವ ಉಪಗ್ರಹಗಳ ಸಂಖ್ಯೆ ಸುಮಾರು ಆರು ಸಾವಿರ ತಲುಪಿರುವುದು ಬಾಹ್ಯಾಕಾಶದ ಟ್ರಾಫಿಕ್ಕನ್ನು ಹೆಚ್ಚಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗಲಿವೆಯೇ ಎಂಬ ಸಂಶಯ ಹುಟ್ಟುಹಾಕಿದೆ.
ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X