ಲೋಕಸಭೆಗೆ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ, ಕೃಷ್ಣ
ಮದ್ದೂರು, ಫೆ. 16 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದರು. ತಾವು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೂಡ ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಜೊತೆಗೆ ಮೈತ್ರಿ ನಿರಾಕರಿಸಿದ್ದ ದೇವೇಗೌಡರಿಗೆ ಕೃಷ್ಣ ತಿರುಗೇಟು ನೀಡಿದಂತಾಗಿದೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆಯೇನೂ ಇಲ್ಲ, ಸೋನಿಯಾ ಗಾಂಧಿ ಅವರಿಂದ ಸ್ಪರ್ಧಿಸುವಂತೆ ಯಾವುದೇ ಸೂಚನೆಯೂ ಬಂದಿಲ್ಲ ಎಂದು ಅವರು ಹೇಳಿದರು. ರಾಜ್ಯದ 28 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ವರಿಷ್ಠರಿಗೆ ಕಳುಹಿಸುವ ಜವಾಬ್ದಾರಿ ಕೆಪಿಸಿಸಿ ಮೇಲಿದೆ. ಪಟ್ಟಿ ಬಂದ ನಂತರ ವರಿಷ್ಠರು ಅಂತಿಮಗೊಳಿಸುತ್ತಾರೆ. ಮಂಡ್ಯ ಕ್ಷೇತ್ರ ಸೇರಿದಂತೆ ಯಾವುದೇ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಎಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ: ಕಾಂಗ್ರೆಸ್ ಜತೆ ಮೈತ್ರಿ ಇಲ್ಲ ಎಚ್ ಡಿ ದೇವೇಗೌಡ












Click it and Unblock the Notifications