ಎಲ್ಲ ಜಿಲ್ಲೆಗಳಲ್ಲಿ ಐಟಿ ಪಾರ್ಕ್ ಸ್ಥಾಪನೆ, ಯಡಿಯೂರಪ್ಪ
ಶಿವಮೊಗ್ಗ, ಫೆ. 17 : ಪ್ರತಿ ಜಿಲ್ಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್‌ಗಳನ್ನು ಸ್ಥಾಪಿಸುವ ಮೂಲಕ ಕೈಗಾರಿಕೆಗಳನ್ನು ಆರಂಭಿಸಿ ಯುವಕರಿಗೆ ಉದ್ಯೋಗ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದೆಂದು ಮುಖ್ಯಮಂತ್ರಿ ಡಾ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ಸಮೀಪದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 15 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಿರುವ ಮಾಹಿತಿ ತಂತ್ರಜ್ಞಾನದ ಉದ್ಯಾನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಆರ್ಥಿಕ ಹಿಂಜರಿತದಿಂದಾಗಿ ಉಂಟಾಗುತ್ತಿರುವ ಉದ್ಯೋಗ ಸಮಸ್ಯೆ ನಿವಾರಿಸಲು ಸರ್ಕಾರ ವಿಶೇಷ ಆರ್ಥಿಕ ವಲಯಗಳನ್ನು ಅಭಿವೃದ್ಧಿಪಡಿಸಿ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗ ಕೊಡುವ ಕಡೆ ಹೆಚ್ಚಿನ ಆದ್ಯತೆ ನೀಡಲಿದೆ. ಕೈಗಾರಿಕೆ ಗಳ ಅಭಿವೃದ್ಧಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೈಗಾರಿಕೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ.
ಇಲ್ಲಿ ಆರಂಭವಾಗುತ್ತಿರುವ ಮಾಹಿತಿ ತಂತ್ರಜ್ಞಾನ ಪಾರ್ಕ್‌ನಿಂದಾಗಿ 3-4 ವರ್ಷಗಳಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯಲಿದೆ ಎಂದರು. ಶಿವಮೊಗ್ಗ ನಗರದ ಅಭಿವೃದ್ಧಿ ದೃಷ್ಠಿಯಿಂದ ಅಗತ್ಯವಾಗಿ ಆಗಬೇಕಾಗಿದ್ದ ಬಹು ದಿನಗಳ ಕನಸಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಡಿಯೂರಪ್ಪ ಅವರು ವಿದ್ಯುಕ್ತ ವಾಗಿ ಚಾಲನೆ ನೀಡಿದರು.
ನಗರ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ , ಮೆಗ್ಗಾನ್ ಆಸ್ಪತ್ರೆ ಉನ್ನತೀಕರಣ, ಶಿಕ್ಷಣ ಇಲಾಖೆ ಕಟ್ಟಡ ಸೇರಿ ದಂತೆ ಸುಮಾರು 258 ಕೋಟಿ ರೂ ವೆಚ್ಚದ 14 ಕಾಮಗಾರಿಗಳಿಗೆ ಮೆಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ಏರ್ಪಡಿಸಿದ್ದ ಬೃಹತ್ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದರು.
(ದಟ್ಸ್ ಕನ್ನಡ ವಾರ್ತೆ)
ಉದ್ಯೋಗ ಸೃಷ್ಟಿ ಅನಿವಾರ್ಯ, ನಂದನ್ ನಿಲೇಕಣಿ












Click it and Unblock the Notifications