ಬೆಂಗಳೂರು, ರಿಚ್ಮಂಡ್ ರಸ್ತೆಯಲ್ಲಿ ಕಟ್ಟಡಕ್ಕೆ ಬೆಂಕಿ
ಬೆಂಗಳೂರು, ಫೆ. 19 : ನಗರದ ರಿಚ್ ಮಂಡ್ ರಸ್ತೆಯಲ್ಲಿರುವ ರಹೇಜಾ ಪ್ಯಾರಾಮೌಂಟ್ ಬಹುಮಹಡಿ ಕಟ್ಟಡದ 6 ಮತ್ತು 7ನೇ ಅಂತಸ್ತಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್ ಹಾಗೂ ಮಹತ್ವದ ಕಡತಗಳು ಭಸ್ಮವಾಗಿರುವ ಘಟನೆ ಗುರುವಾರ ಬೆಳಗ್ಗೆ 9.30 ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಕಿ ಕೆನ್ನಾಲಿಗೆ 6 ಮತ್ತು 7 ನೇ ಅಂತಸ್ತಿಗೆ ಪೂರ್ಣವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ಸಂಪೂರ್ಣವಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿದ ಕೂಡಲೇ ಕಟ್ಟಡದಲ್ಲಿದ್ದ ಸಿಬ್ಬಂದಿ ಕೂಡಲೇ ಹೊರಕ್ಕೆ ಬಂದಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಟ್ಟಡದಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದು ಕಾರ್ಯನಿರ್ವಹಿಸುತ್ತಿತ್ತು. ಪೊಲೀಸರು ತನಿಖೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications