ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ

By Staff
|
Google Oneindia Kannada News

No tax cut for outsourcing US companies: Obama
ವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು ಹೆಚ್ಚಿನ ಅದ್ಯತೆ ನೀಡಲಾಗುವುದು ಎಂದರು. ಆರ್ಥಿಕ ಬಿಕ್ಕಟ್ಟಿನಿಂದ ದೇಶದ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ಇದನ್ನು ಸದೃಢಗೊಳಿಸಲು ಭಾರಿ ಪ್ರಯೋಗಗಳನ್ನು ಮಾಡಬೇಕಾಗಿದೆ ಎಂದು ಹೇಳಿದರು.

ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ನಷ್ಟ ಅನುಭವಿಸಿರುವ ಆರ್ಥಿಕ ವಲಯದ ಚೇತರಿಕೆಗೆ 787 ಬಿಲಿಯನ್ ಡಾಲರ್ ಬಿಡುಗಡೆ ಮಾಡಲಾಗುವುದು. ಮುಂದಿನ ಎರಡು ವರ್ಷಗಳಲ್ಲಿ 3.5 ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಅವರು ಹೇಳಿದರು. ಖಾಸಗಿ ಉದ್ಯಮ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಲಕ್ಷಾಂತರ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಈ ರಂಗದ ಚೇತರಿಕೆಗಾಗಿ ತೆರಿಗೆ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 1 ರಂದ ನೂತನ ತೆರಿಗೆ ನೀತಿ ಜಾರಿಗೆ ಬರಲಿದೆ ಎಂದು ಒಬಾಮಾ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X