ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿರಿ

ಮೈಸೂರು, ಫೆ. 27 : 2009-10ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನ ಸೀಟುಗಳ ಅವಕಾಶವಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ , ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ಶೈಕ್ಷಣಿಕ ಮಾರ್ಗದರ್ಶನ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ಅಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.

ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಫೆ 26 ರಿಂದ ವಿತರಣೆ ಆರಂಭವಾಗಿದೆ. ಅರ್ಜಿಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಲಸ್ಟರ್ ಸಹಾಯಕ ಶಿಕ್ಷಣಾಧಿಕಾರಿಗಳು, ವಸತಿ ಶಾಲೆ ಮುಖ್ಯಸ್ಥರ ಕಚೇರಿಗಳಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 16 ರೊಳಗೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವುದು. ಪ್ರವೇಶ ಪರೀಕ್ಷೆಯನ್ನು ದಿನಾಂಕ ಮಾರ್ಚ್ 29ರಂದು ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+