ಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ

ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಬ್ ವಿಷಯದಲ್ಲಿ ಶ್ರೀರಾಮಸೇನೆ ಸಂಘಟನೆ ನಡೆದುಕೊಂಡು ರೀತಿ ಸಂಪೂರ್ಣವಾಗಿ ಕಾನೂನು ವಿರೋಧಿ ಕ್ರಮವಾಗಿದೆ ಎಂದರು. ಸಂಸ್ಕತಿ ರಕ್ಷಿಸಬೇಕು, ಆದರೆ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸಲು ಅಸಾಧ್ಯ ಎಂದು ಶ್ರೀರಾಮಸೇನೆಗೆ ಸ್ಪಷ್ಟ ಎಚ್ಚರಿಕೆ ನೀಡಿದರು. ಈ ವಿಷಯದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಬೆಂಗಳೂರು ದೇಶದ ಪ್ರಮಖ ನಗರ, ದೇಶ, ವಿದೇಶಗಳ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳೂ ಸೇರಿ ಅನೇಕ ಕಂಪನಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಇದರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದ ಅವರು, ಬೆಂಗಳೂರಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಘಟಕವೊಂದನ್ನು ಸ್ಥಾಪಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ದೇಶಕ್ಕಾಗಿ ಪ್ರಾಣ ತ್ಯಾಗಕ್ಕೂ ಹೆದರಬೇಡಿ, ಉನ್ನಿಕೃಷ್ಣನ್












Click it and Unblock the Notifications