ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಪ್ರಿಯಾಂಕ ಗಾಂಧಿ
ಅಮೇಥಿ, ಮಾ. 4 : ಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಸಾಧ್ಯತೆಯನ್ನು ಪ್ರಿಯಾಂಕ ಗಾಂಧಿ ವಾದ್ರಾ ಖಡಾಖಂಡಿತವಾಗಿ ತಳ್ಳಿಹಾಕಿದ್ದಾರೆ. ಆದರೆ ರಾಯ್ ಬರೇಲಿಯಲ್ಲಿ ಸ್ಪರ್ಧಿಸುವ ತಾಯಿ ಸೋನಿಯಾ ಗಾಂಧಿ ಮತ್ತು ಅಮೇಥಿಯಿಂದ ಸ್ಪರ್ಧಿಸುವ ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ರಾಜಕೀಯದಲ್ಲಿ ಯಾವುದೇ ಮಹತ್ವಾಕಾಂಕ್ಷೆ ನನಗಿಲ್ಲ. ಪಕ್ಷ ಬಲಪಡಿಸುವುದು ಮತ್ತು ನನ್ನ ತಾಯಿ ಮತ್ತು ಸಹೋದರನ ಪರ ಪ್ರಚಾರ ನಡೆಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ ಎಂದ ಪ್ರಿಯಾಂಕ, ರಾಜಕೀಯದಲ್ಲಿ ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಜನತೆಯ ಸೇವೆ ಮಾಡುವುದು ನನ್ನ ಗುರಿ ಎಂದು ಹೇಳಿದರು.
ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರದಲ್ಲಿ ಬಿರುಸಿನ ಚುನಾವಣೆ ಪ್ರಚಾರ ನಡೆಸಿದ ಪ್ರಿಯಾಂಕ, ನಂತರ ಕಾಂಗ್ರೆಸ್ ಸೇವಾದಳದ ಸಭೆ ನಡೆಸಿ ಚುನಾವಣೆಗೆ ಸಿದ್ಧರಾಗಲು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications