ಎಫ್.ಡಿ.ಎ.: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು, ಮಾ5 : ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕರು/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮತ್ತು ವಿವಿಧ ಮೀಸಲಾತಿಯಲ್ಲಿ ಆಯಾ ಮೀಸಲಾತಿಯಡಿ ಆಯ್ಕೆಯಾಗಿರುವ ಕೊನೆಯ ಅಭ್ಯರ್ಥಿಗಳ ಅಂಕಗಳು ಮತ್ತು ಜನ್ಮ ದಿನಾಂಕವನ್ನು ಆಯೋಗದ ವೆಬ್‌ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾರ್ಚ್16 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಆಯೋಗದ ಪ್ರಕಟಣೆ ತಿಳಿಸಿದೆ.
ಎಸ್‌ಡಿಸಿ ನೇಮಕಾತಿ: ಮೂಲದಾಖಲೆ ಪರಿಶೀಲನೆ
ಕರ್ನಾಟಕ ಲೋಕಸೇವಾ ಆಯೋಗವು 2008 ರ ಜೂನ್‌ನಲ್ಲಿ ನಡೆಸಿದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಅವರ ಮೀಸಲಾತಿಗಳಿಗೆ ಅನುಗುಣವಾಗಿ ಅರ್ಹರಾದ ಅಭ್ಯರ್ಥಿಗಳನ್ನು 1:2ರ ಅನುಪಾತದಲ್ಲಿ ಮಾರ್ಚ್ 6 ಹಾಗೂ 7ರಂದು ಎರಡನೇ ಹಂತದ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಪ್ರತಿಯೊಂದು ಮೀಸಲಾತಿಯಡಿ ಆಯ್ಕೆಯಾದ ಕೊನೆಯ ಅಭ್ಯರ್ಥಿಯ ಕಟ್‌ಆಫ್ ಅಂಕಗಳು ಮತ್ತು ಅವರ ಜನ್ಮ ದಿನಾಂಕದ ವಿವರಗಳನ್ನು ಆಯೋಗದ ವೆಬ್‌ಸೈಟ್ http://kpsc.kar.nic.in/cutoff ನಲ್ಲಿ ಪ್ರಕಟಿಸಲಾಗಿದೆ.
ಈ ಅಭ್ಯರ್ಥಿಗಳಿಗೆ ವೈಯಕ್ತಿಕ ಸೂಚನಾ ಪತ್ರಗಳನ್ನು ಸಹ ಕಳುಹಿಸಲಾಗಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳಲ್ಲಿ ಕೊನೆಯ ಅಭ್ಯರ್ಥಿಗಿಂತ ಹೆಚ್ಚು ಅಂಕ ಗಳಿಸಿದ್ದು, ಆಯೋಗದ ವೆಬ್‌ಸೈಟಿನಲ್ಲಿ ಅವರ ನೋಂದಣಿ ಸಂಖ್ಯೆ ಪ್ರಕಟವಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮಾರ್ಚ್ 7ರೊಳಗೆ ಈ ಸಂಬಂಧ ಆಯೋಗವನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications