ಬಿಜೆಪಿ ಗೆಲವು, ಭುಜತಟ್ಟಿಕೊಂಡ ಶೋಭಾ
ಬೆಂಗಳೂರು, ಮಾ. 11 : ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಾಡಿರುವ ಅನೇಕ ಜನಪರ ಕಾರ್ಯಗಳಿಂದ ಲೋಕಸಭೆ ಚುನಾವಣೆಯಲ್ಲಿ 22 ಕ್ಕಿಂತ ಅಧಿಕ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸದಿಂದ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ರಿಪೋರ್ಟರ್ಸ್ ಗಿಲ್ಡ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸಮಾಜದ ಎಲ್ಲ ವರ್ಗದ ಜನರಿಗೂ ತಲುಪವಂತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷ ತನ್ನ ಖಾತೆಯನ್ನು ಕರ್ನಾಟಕದಿಂದ ತೆರೆದಿದೆ. ಇದು ರಾಜ್ಯದ ಎಲ್ಲ ಬಿಜೆಪಿ ಕಾರ್ಯಕರ್ತರೂ ಹೆಮ್ಮೆಯಿಂದ ಹೇಳಿಕೊಳ್ಳುವ ಸಂಗತಿ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮರ್ಥ ಆಡಳಿತವನ್ನು ಎಲ್ಲರೂ ಮೆಚ್ಚಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜನರು ಆಶೀರ್ವಾದ ಮಾಡಲಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲಿ 22 ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಅರ್ಹ ಜಯಗಳಿಸಲಿದೆ ಎಂದು ಅವರು ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಕಳೆದ ಬಾರಿ ಉತ್ತಮ ಆಡಳಿತ ನಡೆಸಿದ, ವಾಜಪೇಯಿ ಸರ್ಕಾರ ಅನೇಕ ಜನಪರ ಯೋಜನೆಗಳಿಂದ ಜನರು ಬಿಜೆಪಿ ಆಶೀರ್ವಾದ ಮಾಡಲಿದ್ದಾರೆ. ಬಿಜೆಪಿ ಭಿನ್ನಮತ ಇರುವುದನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ಅನ್ಯ ಪಕ್ಷಗಳ ಮುಖಂಡರು ಕೆಲವರನ್ನು ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಶೋಭಾ ಆರೋಪಿಸಿದರು. ಆದರೆ, ಬಿಜೆಪಿ ಎಂದೆಂದೂ ಏಕತೆ ಕಾಪಾಡಿಕೊಂಡು ಬಂದಿದೆ. ಮುಂದೆಯೂ ಕೂಡ ಇದೇ ಏಕತೆಯಲ್ಲಿಯೇ ಚುನಾವಣೆ ಎದುರಿಸಲಿದೆ. ಅಲ್ಲದೆ ರಾಜ್ಯದಿಂದ 22 ಕ್ಕೂ ಅಧಿಕ ಬಿಜೆಪಿ ಸಂಸದರನ್ನು ದೆಹಲಿಗೆ ಕಳುಹಿಲಿದ್ದೇವೆ ಎಂದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications