ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯು ಪರೀಕ್ಷೆ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮ

By Staff
|
Google Oneindia Kannada News

ಬೆಳಗಾವಿ, ಮಾ.12: ಶುಕ್ರವಾರ ಮಾರ್ಚ್ 13 ರಿಂದ ಜಿಲ್ಲೆಯಲ್ಲಿ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು ಹಾಗೂ ಇತರೆ ಪರೀಕ್ಷಾ ಅವ್ಯವಹಾರವನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಮಾರ್ಚ್ 13ರಿಂದ 26 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ 63 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 47,528 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಈ ಪರೀಕ್ಷೆಗಳು ಶಿಸ್ತು ಹಾಗೂ ಶಾಂತ ವಾತಾವರಣದಲ್ಲಿ ನಡೆಯುವಂತಾಗಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರ ಸುತ್ತಮುತ್ತಲು 144 ನೇ ಕಲಮಿನನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಕ್ರಮಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅಧೀಕ್ಷಕರು ಕೋಣೆ ವೀಕ್ಷಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ತೆಗೆದುಕೊಂಡು ಹೋಗುವದನ್ನು ನಿಷೇಧಿಸಲಾಗಿದೆ.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಂಚಾರಿ ಜಾಗೃತಿ ದಳಗಳನ್ನು ರಚಿಸಿ ನಕಲು ಮಾಡುವದನ್ನು ತಡೆಯಲು ನಿರ್ಧರಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆದಲ್ಲಿ ಆ ಕೇಂದ್ರದ ಮುಖ್ಯ ಅಧೀಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

ಪರೀಕ್ಷಾ ಸಂದರ್ಭದಲ್ಲಿ ಕೊಠಡಿ ಮೇಲ್ವಿಚಾರಕರು ನಕಲಿಗೆ ಸಹಕರಿಸಿದರೆ ಅಂತಹವರ ವಿರುದ್ಧವು ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪರೀಕ್ಷೆಗಳು ಶಾಂತಿ ಹಾಗೂ ಸುಗಮವಾಗಿ ನಡೆಯಲು ವಿದ್ಯಾರ್ಥಿಗಳು ಹಾಗೂ ಪಾಲಕರು ಸಹಕರಿಸುವಂತೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಪರೀಕ್ಷಾ ಅವ್ಯವಹಾರದಲ್ಲಿ ತೊಡಗುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X