ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ

By Staff
|
Google Oneindia Kannada News

Third Front rally in Dabaspet
ಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ ರಾಜಕೀಯ ಬಲಪ್ರದರ್ಶನಕ್ಕೆ ಈ ಸಮಾವೇಶವನ್ನು ಬಳಸಿಕೊಳ್ಳಲಿದ್ದಾರೆ ಎನ್ನಲಿದ್ದಾರೆ.

ತೃತೀಯ ರಂಗದಲ್ಲಿ ಎಡಪಕ್ಷಗಳ ಮುಖಂಡರಾದ ಪ್ರಕಾಶ್ ಕಾರಟ್, ಎ ಬಿ ಬರ್ಧನ್, ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬ ನಾಯ್ಡು, ಎಐಎಡಿಎಂಕೆ ನಾಯಕಿ ಜಯಲಲಿತಾ, ತೆಲಂಗಾಣ ರಾಷ್ಟ್ರೀಯ ಸಮಿತಿಯ ಚಂದ್ರಶೇಖರರಾವ್ ಅವರಂತಹ ಘಟಾನುಘಟಿ ನಾಯಕರಲ್ಲದೆ, ಫಾರ್ವರ್ಡ್ ಬ್ಲಾಕ್, ಆರ್ ಪಿಐ ಪಕ್ಷಗಳು ತೃತೀಯ ರಂಗದಲ್ಲಿ ಗುರುತಿಸಿಕೊಂಡಿವೆ. ಇಂದು ಈ ನಾಯಕರೆಲ್ಲಾ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದ್ದು, ಅವರ ಪ್ರತಿನಿಧಿ ಡಾ ಮೈತ್ರೇಯನ್ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಪರವಾಗಿ ಅವರ ಸರ್ಕಾರದ ಉಪಮುಖ್ಯಮಂತ್ರಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಬಸ್ ಪೇಟೆ ಬಳಿಯ ಬಿಪಿಎಲ್ ಗೆ ಸೇರಿದ 120 ಎಕರೆ ಪ್ರದೇಶದಲ್ಲಿ ಸಮಾವೇಶಕ್ಕೆ ಎಲ್ಲ ಸಿದ್ಧೆತೆಗಳನ್ನು ಮಾಡಿಕೊಂಡಿದ್ದು, ರಾಜ್ಯ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆಯಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X