ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?

ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ ನಡೆಯಿತು. ಇದೀಗ ಹೊಸದಾಗಿ ಅಂಬರೀಷ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸರ್ವ ಪ್ರಯತ್ನಗಳು ನಡೆಯುತ್ತಿವೆ.
ಈ ಸಂಬಂಧ ಬಿಜೆಪಿ ನಾಯಕರು ಅಂಬರೀಷ್ ಅವರೊಂದಿಗೆ ಈಗಾಗಲೇ ಮಾತುಕತೆಯನ್ನು ನಡೆಸಿದ್ದಾರೆ.ಮಾರ್ಚ್ 14ರ ಚುನಾವಣಾ ಸಮಿತಿ ಸಭೆ ವೇಳೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications