ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ

By Staff
|
Google Oneindia Kannada News

Nagamarapalli violates code of conduct
ಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ ಪಾಪನಾಶಿ ದೇವಾಲಯದಲ್ಲಿ ಅನುಮತಿ ಪಡೆಯದೆ ಬೀದರ್ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರು ಪೂಜಾ ಕಾರ್ಯವನ್ನು ನೆರವೇರಿಸಿದ್ದಾರೆ. ಪೂಜೆ ನಂತರ ಪ್ರಸಾದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ದೇವಸ್ಥಾನಕ್ಕೆ ಸುಮಾರು 80ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ ಹತ್ತಾರು ವಾಹನದಲ್ಲಿ ಬಿಜೆಪಿ ಧ್ವಜ ಹಾಗೂ ಮುಖಂಡರ ಭಾವಚಿತ್ರ ಅಂಟಿಸಿಕೊಂಡು ಹೋಗಿರುವುದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಆಧಿಕಾರಿ ಹರ್ಷ ಗುಪ್ತಾ ಅವರ ಗಮನಕ್ಕೆ ಬಂದಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಅವರು ತಹಸಿಲ್ದಾರ್ ಶರಣಪ್ಪ ಅವರ ಸೂಚನೆ ನೀಡಿದ್ದಾರೆ. ತಹಸಿಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ದೇವಾಲಯಕ್ಕೆ ಭೇಟಿ ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಅಭ್ಯರ್ಥಿ ವಿರುದ್ಧ ನೀತಿ ಸಂಹಿತೆ ಕಾನೂನಿನಡಿ ಪ್ರಕರಣ ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗುರುಪಾದಪ್ಪ ನಾಗಮಾರಪಲ್ಲಿ ಅವರು, ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಇಂದು ಪಾಪಾನಾಶಿ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಏರ್ಪಡಿಸಲಾಗಿತ್ತು. ಪೂಜೆ ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತೇ ಹೊರತು ಇದು, ಬಾಡೂಟ ಅಲ್ಲ. ದೇವಾಲಯದಲ್ಲಿ ಪೂಜಾ ನಡೆಸುವ ವಿಷಯವನ್ನು ಚುನಾವಣೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಜನರು ಬದಲಾವಣೆ ಬಯಸಿದ್ದಾರೆ, ರಾಘವೇಂದ್ರ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X