ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್

MH Ambarish
ಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಸೇರುವುದು, ಬೆಂಗಳೂರಿನಿಂದ ಸ್ಪರ್ಧಿಸುವುದು ಎಲ್ಲವೂ ಸತ್ಯಕ್ಕೆ ದೂರ ಎಂದರು. ಕಾಂಗ್ರೆಸ್ ಪಕ್ಷವನ್ನು ತ್ಯಜಿಸುವ ಪ್ರಶ್ನೆ ಇಲ್ಲ. ಆದರೆ, ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ಕೆಲ ಮುಖಂಡರಿಂದ ಮುಖಭಂಗ ಅನುಭವಿಸಿರುವುದು ಸತ್ಯ ಎಂದು ಒಪ್ಪಿಕೊಂಡರು.

ಇದಕ್ಕೂ ಮುನ್ನ ಸಂಸದೆ ತೇಜಸ್ವಿನಿ ಅವರು ಅಂಬರೀಷ ಅವರನ್ನು ಭೇಟಿ ಮಾಡಿ ಪಕ್ಷ ಬಿಡದಂತೆ ಮನವೊಲಿಸಲು ಯತ್ನಿಸಿದ್ದರು. ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಹಾಗೂ ಪ್ರತಿಪಕ್ಷದ ನಾಯಕ ಖರ್ಗೆ ಅನುಮತಿ ಮೇರೆಗೆ ಅಂಬರೀಷ ಜೊತೆಗೆ ಚರ್ಚೆ ನಡೆಸಿರುವೆ ಎಂದು ತೇಜಸ್ವಿನಿ ಹೇಳಿದ್ದಾರೆ. ಆದರೆ, ಈ ಕುರಿತು ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಂದಿಲ್ಲ. ಪಕ್ಷದ ಹಿರಿಯರು ಮಾಡಬೇಕಿರುವ ಕೆಲಸವನ್ನು ತೇಜಸ್ವಿನಿ ಮಾಡಿ ಮಾಧ್ಯಮಗಳ ಮೂಲಕ ಹೇಳಿಕೆ ನೀಡುತ್ತಿರುವುದು ಪ್ರದೇಶ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿದೆ. ಕಳೆದ ಕೆಲ ದಿನಗಳಿಂದ ತೇಜಸ್ವಿನಿ ಕಾರ್ಯಾಧ್ಯಕ್ಷ ಡಿಕೆ ಶಿವಕಮಾರ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+