ಪುತ್ತೂರಲ್ಲಿ ಎರಡು ಕೋಮಿನ ನಡುವೆ ಘರ್ಷಣೆ
ಪುತ್ತೂರು, ಮಾ. 17 : ಮಂಗಳೂರು ಪಬ್ ದಾಳಿ ಹಾಗೂ ಕೇರಳ ಶಾಸಕರ ಮಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಖ್ಯಾತಿಗೆ ಒಳಗಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ವಿವಾದದಿಂದ ಮುಕ್ತಿ ದೊರಕುವಂತೆ ಕಾಣುತ್ತಿಲ್ಲ.
ಈ ಎರಡೂ ಘಟನೆಗಳು ಮಾಸುವ ಮುನ್ನವೇ ಇಂದು ಮತ್ತೊಂದು ಘಟನೆ ನಡೆದಿದ್ದು, ಯುವತಿಯರನ್ನು ಮಾತನಾಡಿಸಿದ್ದಕ್ಕೆ ಅನ್ಯ ಕೋಮಿನ ಯುವಕರ ಮೇಲೆ ಹಲ್ಲೆ ನಡೆದಿದೆ. ಕಲ್ಲು ತೂರಾಟ ನಡೆದು, ಉದ್ರಿಕ್ತ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಈ ಯುವತಿಯರು ಮಂಗಳೂರಿನವರು ಎನ್ನಲಾಗಿದ್ದು, ಇಂದು ಪುತ್ತೂರಿಗೆ ಬಂದಿದ್ದರು. ಪಾರ್ಕ್ ನಲ್ಲಿ ಕುಳಿತಿದ್ದಾಗ ಅನ್ಯ ಕೋಮಿಗೆ ಸೇರಿದ ಯುವಕರು ಯುವತಿಯರನ್ನು ಮಾತನಾಡಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಇನ್ನೊಂದು ಕೋಮಿನ ಯುವಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಗುಂಪು ಚೆದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡು ಹೊರಬಂದ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಠಾಣೆಯಲ್ಲಿಯೂ ಎರಡು ಕೋಮಿನ ಯುವಕರ ಮಧ್ಯೆ ವಾಗ್ವಾದ ನಡೆದಿದೆ. ಹಲ್ಲೆ ನಡೆಸಿದವರು ಭಜರಂಗದಳ ಸಂಘಟನೆಗೆ ಸೇರಿದ ಯುವಕರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications