ವಾಯುಸೇನೆ ಮುಖ್ಯಸ್ಥರಾಗಿ ವಸಂತ್ ನಾಯಕ್
ನವದೆಹಲಿ, ಮಾ.21: ಭಾರತೀಯ ವಾಯುಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಪ್ರದೀಪ್ ವಸಂತ್ ನಾಯಕ್ ಅವರನ್ನು ನೇಮಿಸಲಾಗಿದೆ. ಏರ್ ಚೀಫ್ ಮಾರ್ಷಲ್ ಫಾಲಿ ಹೋಮಿ ಮೇಜರ ಅವರ ಅಧಿಕಾರದ ಅವಧಿ ಮೇ.31ಕ್ಕೆ ಮುಕ್ತಾಯಗೊಳ್ಳಲಿದ್ದು ಅಂದು ನಾಯಕ್ ಅವರು ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಭಾರತೀಯ ವಾಯುಪಡೆಯಲ್ಲಿ 39 ವರ್ಷಗಳ ಕಾಲ ಪ್ರದೀಪ್ ವಸಂತ್ ನಾಯಕ್ ಸೇವೆ ಸಲ್ಲಿಸಿದ್ದಾರೆ. 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲೂ ಭಾಗವಹಿಸಿದ್ದರು. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಶಿಕ್ಷಣ ಪಡೆದ ಅವರು 1969ರಲ್ಲಿ ಭಾರತೀಯ ವಾಯುಪಡೆಗೆ ಸೇರಿದರು.
(ಏಜೆನ್ಸೀಸ್)












Click it and Unblock the Notifications