ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ

By Staff
|
Google Oneindia Kannada News

ಬೀದರ್, ಮಾ.21: ಬೀದರ್ ಜಿಲ್ಲೆ ಹಾಗೂ ನೆರೆಯ ಆಂಧ್ರಪ್ರದೇಶದ ಮೇಡಕ್ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಮೇಡಕ್ ಜಿಲ್ಲೆಯಲ್ಲಿ ಅಕ್ರಮ ಮದ್ಯ ತಯಾರಿಕೆಯ ಘಟಕವೊಂದರಿಂದ ರೂ. 2.4 ಲಕ್ಷ ಮೌಲ್ಯದ ಸ್ಪಿರಿಟ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಈ ವರೆಗೆ ಒಟ್ಟು 186 ಪ್ರಕರಣ ದಾಖಲಿಸಲಾಗಿದ್ದು ಸುಮಾರು 59 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯ ಮತ್ತಿತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ, ಬೆಂಗಳೂರು ನಗರ, ಧಾರವಾಡ, ಹಾವೇರಿ, ಗುಲ್ಬರ್ಗ, ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದ್ದು ಅತಿ ಹೆಚ್ಚು ಅಂದರೆ 53 ಪ್ರಕರಣಗಳನ್ನು ಬೆಂಗಳೂರು ನಗರದಲ್ಲಿ ದಾಖಲಿಸಲಾಗಿದೆ.

ನೀತಿ ಸಂಹಿತೆ: ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 77 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 64 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಏಳು ಪ್ರಕರಣಗಳು ವಿವಿಧ ಪಕ್ಷಗಳಿಗೆ ಸಂಬಂಧಿಸಿದ್ದೆಂದು ಸಾಬೀತಾಗಿದ್ದು, ಎರಡು ಪ್ರಕರಣಗಳಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಕಾರ್ಯನಿರ್ವಹಿಸಿದ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಎಪಿಕ್: ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ನೀಡುವ ಅಭಿಯಾನವು ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಏಪ್ರಿಲ್ 8ರ ವರೆಗೆ ಹಾಗೂ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಏಪ್ರಿಲ್ 15ರ ವರೆಗೆ ನಡೆಯಲಿದೆ. ಇನ್ನೂ ಎಪಿಕ್ ಪಡೆಯದ ಮತದಾರರು ಕೂಡಲೇ ಗುರುತಿನ ಚೀಟಿ ಪಡೆಯುವಂತೆ ಅವರು ಮನವಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X