ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಳ್ಳಾರಿಯಲ್ಲಿ ಮತದಾರರ ಪಟ್ಟಿಯಲ್ಲಿಅಕ್ರಮ
ಬೆಂಗಳೂರು, ಮಾ. 21: ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ವಿಷಯದಲ್ಲಿ ಅಕ್ರಮವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ಇಂದು ತಿಳಿಸಿದರು.
ಬುಧವಾರ ಬಳ್ಳಾರಿ ಭೇಟಿ ಸಂದರ್ಭದಲ್ಲಿ ಬಳ್ಳಾರಿ ನಗರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತ 28 ಸಾವಿರ ಅರ್ಜಿಗಳ ಸ್ವೀಕಾರವಾಗಿದ್ದು, ಅದರಲ್ಲಿ 11 ಸಾವಿರ ಅರ್ಜಿಗಳು ತಿರಸ್ಕೃತಗೊಂಡಿವೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ವ್ಯಕ್ತಿಗಳೂ ಪುನಃ ಅರ್ಜಿ ಸಲ್ಲಿಸಿದ್ದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ 30 ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಅರ್ಜಿಗಳ ಕೂಲಂಕುಷ ಪರಿಶೀಲನೆಗೆ 10 ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
mn vidyashankar ಎಂ ಎನ್ ವಿದ್ಯಾಶಂಕರ್ ಬಳ್ಳಾರಿ lok sabha polls 09 ಗುರುತಿನ ಚೀಟಿ ಮತದಾರರ ಪಟ್ಟಿ ಅಕ್ರಮ voters list voter id
Story first published: Saturday, March 21, 2009, 16:25 [IST]