ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನಲ್ಲಿ 43,457 ಎಸೆಸ್ಸೆಲ್ಸಿಪರೀಕ್ಷಾರ್ಥಿಗಳು

By Staff
|
Google Oneindia Kannada News

ಮೈಸೂರು, ಮಾ. 21:ಜಿಲ್ಲೆಯಲ್ಲಿ ಮಾರ್ಚ್ 30 ರಂದು ಆರಂಭಗೊಳ್ಳಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈ ಬಾರಿ ಜಿಲ್ಲೆಯ 578 ಶಾಲೆಗಳ 43,457 ಪರೀಕ್ಷಾರ್ಥಿಗಳಿದ್ದು, 142 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಎಸ್. ವಿಶ್ವನಾಥ್ ಇಂದು ಸುದ್ದಿಗಾರರಿಗೆ ತಿಳಿಸಿದರು.

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.ಜಿಲ್ಲೆಯ ಒಟ್ಟು ಪರೀಕ್ಷಾರ್ಥಿಗಳು 20,568 ವಿದ್ಯಾರ್ಥಿನಿಯರು ಹಾಗೂ22,889 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ರಿಪೀಟರ್‍ಸ್‌ಗಳ ಸಂಖ್ಯೆ 6545 ಆಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಐದು ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಹಾಗೂ ನಾಲ್ಕು ಅತೀಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲಾ ಹಂತದಲ್ಲಿ ಐದು ಜಾಗೃತದಳ ಕಾರ್ಯನಿರ್ವಹಿಸಲಿದೆ. ತಾಲ್ಲೂಕು ಹಂತದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಜಾಗೃತ ತಂಡ ಕಾರ್ಯನಿರ್ವಹಿಸಲಿದೆ ಎಂದು ವಿಶ್ವನಾಥ್ ತಿಳಿಸಿದರು.

ಎಸ್ ಎಸ್ ಎಲ್ ಸಿ. ಪರೀಕ್ಷೆಗಳು ಮಾರ್ಚ್ 30ರಂದು ಆರಂಭವಾಗಿ ಏಪ್ರಿಲ್ 6ರಂದು ಅಂತ್ಯಗೊಳ್ಳಲಿದೆ. ಏಪ್ರಿಲ್ 10ರಿಂದ 20ರವರೆಗೆ ಮೈಸೂರಿನ ಆರು ಪರೀಕ್ಷಾ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗೇಂದ್ರಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು ವಿವರ ನೀಡಿದರು.
(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X