ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಲ್ಪಸಂಖ್ಯಾತರ ರಕ್ಷಣೆಯೇ ಗುರಿ, ಯಡಿಯೂರಪ್ಪ

By Staff
|
Google Oneindia Kannada News

We will provide to secure schemes to Minorities
ಬೆಂಗಳೂರು, ಮಾ. 24 : ಮುಸ್ಲಿಂ ಬಾಂಧವರಿಗೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ. ಮುಂದೆ ದಿನಗಳಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಆದರೆ, ನೀತಿ ಸಂಹಿತೆ ಅಡ್ಡ ಇರುವ ಹಿನ್ನೆಲೆಯಲ್ಲಿ ಕೆಲವು ಭರವಸೆಗಳನ್ನು ಬಹಿರಂಗಗೊಳಿಸಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತ ಘಟಕದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅನ್ಯ ಪಕ್ಷಗಳ ಮುಖಂಡರ ಅಲ್ಪಸಂಖ್ಯಾತರನ್ನು ಎತ್ತಿಕಟ್ಟಿ ಮತ ಪಡೆಯುವ ಸಂಚು ರೂಪಿಸಿವೆ. ಇಂಥವರ ಮಾತಿಗೆ ಕಿವಿಗೊಡಬೇಡಿ ಎಂದರು. ಕಾಂಗ್ರೆಸ್ ಪಕ್ಷ ಈ ವರೆಗೆ ಕೇವಲ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಬಳಸಿಕೊಂಡಿದೆ. ಆದರೆ, ಬಿಜೆಪಿ ಸರ್ಕಾರ ಈ ಹಿಂದಿನ ಸರ್ಕಾರಗಳಿಗಿಂತ ಏಳು-ಎಂಟು ಕೋಟಿ ರುಪಾಯಿ ಹೆಚ್ಚಿನ ಹಣ ಮೀಸಲಿರಿಸಿದೆ ಎಂದು ಹೇಳಿದರು.

ಬಿಜೆಪಿ ಎಂದೆಂದಿಗೂ ಮುಸ್ಲಿಂ ವಿರೋಧಿಯಲ್ಲ. ತಮಗೆ ಯಾವುದೇ ಭೇದ-ಭಾವಗಳಿಲ್ಲ. ಎಲ್ಲರೂ ಸಮಾನರಾಗಿರಬೇಕು ಮತ್ತು ಎಲ್ಲ ವರ್ಗಗಳು ಸಮಾನ ಅವಕಾಶ ಪಡೆಯಬೇಕೆಂಬ ಪಕ್ಷದ ಗುರಿ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ವಿರುದ್ಧ ಟೀಕೆ ಟಿಪ್ಪಣಿ ಮಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಇವರ ಪಕ್ಷಪಾತಿ ಧೋರಣೆಯಿಂದ ರಾಜ್ಯಕ್ಕೆ ಭರಿಸಲಾರದ ಅನ್ಯಾಯವಾಗಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದೆ ಎನ್ನುವ ಏಕೈಕ ಕಾರಣದಿಂದ ಪ್ರತಿ ಹಂತದಲ್ಲಿಯೂ ಸೋನಿಯಾಗಾಂಧಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಪಕ್ಕದ ರಾಜ್ಯಕ್ಕೆ ಸಾವಿರಾರು ಕೋಟಿ ರುಪಾಯಿ ಅನುದಾನ ನೀಡಿ ನಮಗೆ ಮಾತ್ರ ನೀಡುವುದಿಲ್ಲ ಎಂದರೆ ಏನರ್ಥ ಎಂದು ಅವರು ಪ್ರಶ್ನಿಸಿದ್ದಾರೆ

(ದಟ್ಸ್ ಕನ್ನಡ ವಾರ್ತೆ)
ತಾರಕಕ್ಕೇರಿದ ಬಿಜೆಪಿ-ಆಯೋಗದ ಜಗಳ
ಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X