ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ದೇವೇಗೌಡ
ಹಾಸನ,
ಮಾ. 25 : ಭಾರತ ಎಂದೆಂದಿಗೂ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ಬಿಜೆಪಿಯ ರಾಮಮಂದಿರ ನಿರ್ಮಾಣದ ಮಾತು ಬರೀ ಬೊಗಳೆ, ಅವರು ಸ್ವಯಂ ಶಕ್ತಿಯಿಂದ ಅಧಿಕಾರಕ್ಕೆ ಬಂದರೂ ಅದು ಸಾಧ್ಯವಿಲ್ಲ. ಹಿಂದೂ ಮತಬ್ಯಾಂಕ್ ಮೇಲೆ ಕಣ್ಣಿಟ್ಟು ಇಂತಹ ಮಾತುಗಳನ್ನು ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸಿದ್ದಾರೆ. id="toptextpromo">ಸ್ವಂತ
ಶಕ್ತಿಯಿಂದ ಅಧಿಕಾರಕ್ಕೆ ಬಂದ ಯಾವ ಪಕ್ಷಗಳಿಗೂ ಸ್ಥಿರ ಸರ್ಕಾರ ನೀಡಲು ಸಾಧ್ಯವಿಲ್ಲ. ಆಪರೇಷನ್ ಕಮಲದ ಮೂಲಕ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದೆ. ನಾವು ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲವೆಂದು ನಮ್ಮ ಪಕ್ಷವನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ. 'ಕಮಲ' ನೀರಿಲ್ಲದೆ ಬಾಡುವ ಕಾಲ ದೂರವಿಲ್ಲ. ತೃತೀಯರಂಗದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ, ಯುಪಿಎಗೆ ಪರ್ಯಾಯವಾಗಿ ತೃತೀಯರಂಗ ಹೊರಹೊಮ್ಮಲಿದೆ ಎನ್ನುವ ಭಯ ಅವರಿಗೆ ಕಾಡುತ್ತಿದೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)ಕುಮಾರಣ್ಣನಿಗೆ ಗೌಡರ ಹಿತೋಪದೇಶ












Click it and Unblock the Notifications