ಕಾಂಗ್ರೆಸ್, ಜೆಡಿಎಸ್ ಪಟ್ಟಿಗಾಗಿ ಕಾಯುತ್ತಿರುವ ಬಿಜೆಪಿ
ಬೆಂಗಳೂರು, ಮಾ. 26 : ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ನಂತರ ಬಿಡುಗಡೆ ಮಾಡಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಈ ವಿಷಯ ತಿಳಿಸಿದ್ದು, ಈ ಕ್ಷೇತ್ರಗಳಿಗೆ ಆ ಎರಡು ಪಕ್ಷಗಳು ತನ್ನ ಅಭ್ಯರ್ಥಿಗಳ ಘೋಷಿಸಿದ ನಂತರ ಬಿಡುವುದು ತಂತ್ರವನ್ನು ರೂಪಿಸಲಾಗಿದೆ ಎಂದರು.
ಬಿಜೆಪಿ ಸರ್ಕಾರ ಕೋಮುವಾದಿ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಾಡಿರುವ ಆರೋಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, 1958 ರಲ್ಲಿ ಜನಸಂಘ ಆರಂಭವಾದಾಗಿನಿಂದಲೂ ಕಾಂಗ್ರೆಸ್ ನಾಯಕರು ಹಣೆಪಟ್ಟಿ ಕಟ್ಟಿದ್ದಾರೆ. ಆದರೆ, ಜನರಿಗೆ ನಿಜಾಂಶ ಏನೆಂಬದು ಗೊತ್ತಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಬದಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬದಲಾಗೋದು ರಾಜ್ಯ ಸರ್ಕಾರ ಅಲ್ಲ, ಕೇಂದ್ರದ ಯುಪಿಎ ಸರ್ಕಾರ ಎಂದು ವ್ಯಂಗ್ಯವಾಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications